Monday, September 14, 2026

BDA Apartments

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ- ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬ...
Home Front Page ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ- ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ…

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ- ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ…

ಉಡುಪಿ,ಡಿ,20,2019(www.justkannada.in): ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರಶ್ರೀಗಳನ್ನ ಇಂದು ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಶ್ರೀಗಳ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು  ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆಸ್ಪತ್ರೆ,  ಉಸಿರಾಟ ತೊಂದರೆಯಿಂದಾಗಿ ಮುಂಜಾನೆ 5 ಗಂಟೆಗೆ ಶ್ರೀಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.  ಶ್ರೀಗಳ ಸ್ಥಿತಿ ಗಂಭೀರವಾಗಿದ್ದು ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳಿಗೆ ಆಂಟಿ ಬಯೋಟಿಕ್  ಹಾಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.

Key words: udupi- pejavar shri-health –manipal hospital-doctor