ಉಕ್ರೇನ್ ಶವಗಾರದಲ್ಲಿ ನವೀನ್ ಮೃತದೇಹ: ರಾಜ್ಯಕ್ಕೆ ತರುವ ಪ್ರಯತ್ನ ನಡೆಯುತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಮಾರ್ಚ್,8,2022(www.justkannada.in): ಉಕ್ರೇನ್ ನಲ್ಲಿ ರಷ್ಯಾ ಕ್ಷಿಪಣಿ ದಾಳಿ ವೇಳೆ ಮೃತಪಟ್ಟ ಕರ್ನಾಟಕದ ಹಾವೇರಿ ಜಿಲ್ಲೆಯ ನವೀನ್ ಮೃತದೇಹವನ್ನ  ತರುವ ಪ್ರಯತ್ನ ನಡೆಯುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಉಕ್ರೇನ್ ನಲ್ಲಿ ನವೀನ್ ಮೃತದೇಹ ಪತ್ತೆಯಾಗಿದೆ. ಉಕ್ರೇನ್ ಶವಗಾರದಲ್ಲಿ ಇಡಲಾಗಿದೆ. ನವೀನ್ ಮೃತದೇಹ ತರುವ ಪ್ರಯತ್ನ ನಡೆಯುತ್ತಿದೆ. ಎಂಬೆಸಿ ಅಧಿಕಾರಿಗಳ ಜತೆ ಮಾತನಾಡಿದ್ದೇವೆ. ಕೇಂದ್ರ ಸಚಿವರ ಜತೆ ಮಾತನಾಡಿದ್ದೇನೆ. ರಾಯಭಾರ ಕಚೇರಿ ಅಧಿಕಾರಿಗಳ ಸಂಪರ್ಕದಲ್ಲಿದ್ದೇವೆ ಎಂದರು.

ಐದು ರಾಜ್ಯಗಳ ಮತದಾನೋತ್ತರ ಸಮೀಕ್ಷೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ,  ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿತ್ತು.  ಆ ನಿರೀಕ್ಷೆಗೆ ಅನುಗುಣವಾಗಿ ಎಕ್ಸಿಟ್ ಪೋಲ್ ಹೇಳುತ್ತಿವೆ. ಇನ್ನೂ ಎರಡು ದಿನ ಕಾದು ನೋಡೋಣ ಎಂದರು.

Key words: Ukraine-naveen-deadbody-CM-Basavaraj bommai