ಶಾಸಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ಟೈರ್ ಗೆ ಬೆಂಕಿ ಹಚ್ಚಿ ಬೆಂಬಲಿಗರಿಂದ ಪ್ರತಿಭಟನೆ…

ಬೆಳಗಾವಿ,ಆ,20,2019(www.justkannada.in) ಶಾಸಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಅವರ ಬೆಂಬಲಿಗರು ಇಂದು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿರುವ ಕೋರ್ಟ್ ಸರ್ಕಲ್ ಬಳಿ ಜಮಾಯಿಸಿದ ಬೆಂಬಲಿಗರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಉಮೇಶ್ ಕತ್ತಿಗೆ  ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ವಕೀಲರು ಜೆಎಂಎಫ್ ಸಿ ಕೋರ್ಟ್ ಕಲಾಪ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇಂದು ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಯಾಗಿದ್ದು 17 ಮಂದಿ ಸಚಿವರಾಗಿ ಪ್ರಮಾಣ ವಚನಸ್ವೀಕರಿಸಿದ್ದಾರೆ. ಈ ಬೆನ್ನಲ್ಲೆ ಬಿಜೆಪಿಯಲ್ಲಿ  ಅಸಮಾಧಾನ ಸ್ಪೋಟಗೊಂಡಿದ್ದು ತಮ್ಮ ನಾಯಕರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.

Key words: Umesh katti-supporters- Protest -belagavi