ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ: ಹೈಕೋರ್ಟ್ ನಿಂದ ಮಹತ್ವದ ತೀರ್ಪು.

ಬೆಂಗಳೂರು,ಸೆಪ್ಟಂಬರ್,29,2021(www.justkannada.in): ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಇಂದು ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ಪ್ರಕಟಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಮತ್ತು ಪ್ರದೀಪ್ ಸಿಂಗ್ ಯೆರೂರ ಅವರ ಪೀಠ ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ತೀರ್ಪು ಪ್ರಕಟಿಸಿದೆ. ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007 ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಇದಲ್ಲದೇ ಹಲವು ಅತ್ಯಾಚಾರ ಕೊಲೆ ಪ್ರಕರಣಗಳಲ್ಲಿ ಉಮೇಶ್ ರೆಡ್ಡಿ ಆರೋಪಿಯಾಗಿದ್ದ.  ಈ ಮಧ್ಯೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆ ಎತ್ತಿ ಹಿಡಿದಿತ್ತು.

ನಂತರ ಉಮೇಶ್ ರೆಡ್ಡಿ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದ. ಆದರೆ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನ  2013 ರಲ್ಲಿ ತಿರಸ್ಕರಿಸಿದ್ದರು. ತದನಂತರ ಗಲ್ಲು ಶಿಕ್ಷೆ ಜೀವಾವಧಿಯಾಗಿ ಮಾರ್ಪಡಿಸಲು ಕೋರಿ ಉಮೇಶ್ ರೆಡ್ಡಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಇದೀಗ ಈ ಅರ್ಜಿಯನ್ನ ವಜಾಗೊಳಿಸಿ ಹೈಕೋರ್ಟ್ ಗಲ್ಲುಶಿಕ್ಷೆ ಖಾಯಂಗೊಳಿಸಿದೆ.

Key words: Umesh Reddy -sentenced to death-judgment – High Court.