ಆಸ್ಟ್ರೇಲಿಯಾ ಟಿ-20 ಸರಣಿಯಿಂದ ಮೊಹಮ್ಮದ್ ಶಮಿ ಔಟ್ ಉಮೇಶ್ ಯಾದವ್ ಇನ್

ಬೆಂಗಳೂರು, ಸೆಪ್ಟೆಂಬರ್ 18, 2022 (www.justkannada.in): ಕ್ರಿಕೆಟಿಗ ಮೊಹಮ್ಮದ್ ಶಮಿ ಅವರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ.

ಕೋವಿಡ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 20 ರಿಂದ ಮೊಹಾಲಿಯಲ್ಲಿ ಪ್ರಾರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ T20 ಸರಣಿಯಿಂದ ಹೊರಗುಳಿಯಲಿದ್ದಾರೆ.

ಕೋವಿಡ್‌ ಪಾಸಿಟಿವ್‌ ದೃಢಪಟ್ಟಿರುವ ಬಗ್ಗೆ ಬಿಸಿಸಿಐ ಮಾಹಿತಿ ನೀಡಿದೆ. ಆದರೆ, ರೋಗಲಕ್ಷಣಗಳು ಸೌಮ್ಯವಾಗಿರುವುದರಿಂದ ಚಿಂತಿಸಬೇಕಾಗಿಲ್ಲ.

ಮೊಹಮ್ಮದ್ ಶಮಿ ಬದಲಿಗೆ ವೇಗಿ ಉಮೇಶ್ ಯಾದವ್ ಅವರನ್ನು ಟೀಂಗೆ ಸೇರಿಸಿಕೊಳ್ಳಲಾಗಿದೆ.

ಶಮಿ ಸದ್ಯ ಪ್ರತ್ಯೇಕವಾಗಿದ್ದಾರೆ. ಗುಣಮುಖವಾದ ಬಳಿಕ ತಂಡಕ್ಕೆ ಮತ್ತೆ ಸೇರಲು ಸಾಧ್ಯವಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.