ರಸ್ತೆ, ಟ್ರಾಫಿಕ್ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಸಭೆ: ಸಮಿತಿ ರಚಿಸಲು ತೀರ್ಮಾನ.

ಬೆಂಗಳೂರು,ಸೆಪ್ಟಂಬರ್,8,2022(www.justkannada.in):  ಬೆಂಗಳೂರು ರಸ್ತೆ, ಟ್ರಾಫಿಕ್ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ  ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಚರ್ಚೆ ನಡೆಸಿದರು.

ನಗರದ ಖಾಸಗಿ ತಾರಾ ಹೋಟೆಲ್​ ನಲ್ಲಿ ನಿತಿನ್ ಗಡ್ಕರಿ ಜೊತೆ ಸಭೆ ನಡೆಸಿ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿದರು.  ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಹೊಸ ಟೆಕ್ನಾಲಜಿ ಬಳಸಿ ಟ್ರಾಫಿಕ್ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರು ಸುತ್ತಮುತ್ತಲಿನ ರಸ್ತೆ ಬಗ್ಗೆ ಸಮಿತಿ ರಚಿಸಲು ತೀರ್ಮಾನ ಮಾಡಿದ್ದೇವೆ. ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ ಬಗ್ಗೆಯೂ ಚರ್ಚಿಸಿದ್ದೇವೆ. ಡ್ರೈನೇಜ್ ಸಿಸ್ಟಮ್​ ಮಾಡಿ ಮಳೆ ನೀರು ಹರಿದು ಹೋಗಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುತ್ತೆ. ಕೂಡಲೇ ರಸ್ತೆ ದುರಸ್ತಿಗೆ ಅಧಿಕಾರಿಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ  ಸೂಚನೆ ನೀಡಿದ್ದಾರೆ ಎಂದರು.

ಎಲಿವೇಟೆಡ್​ ಟ್ರಾನ್ಸ್​ಪೋರ್ಟ್​ ಬಗ್ಗೆ,  ರೋಪ್ ವೇ ಮೂಲಕ ಸಂಚರಿಸುವ ಕುರಿತು ಹಾಗೂ ಶಿರಾಡಿಘಾಟ್ ಸೇರಿ ಅನೇಕ ಅನೇಕ ಹೆದ್ದಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು  ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

 

Key words: CM Bommai –meeting-Union Minister- Nitin Gadkari -traffic