ರಾಜ್ಯ ಬಿಜೆಪಿ ಸರ್ಕಾರಕ್ಕೆ ಶತದಿನ ಸಂಭ್ರಮ: ನೂರು ದಿನದ ಸಾಧನೆಗಳ ಪುಸ್ತಕ ಬಿಡುಗಡೆ ಮಾಡಿದ ಸಿಎಂ ಬಿಎಸ್ ಯಡಿಯೂರಪ್ಪ…

Promotion

ಬೆಂಗಳೂರು,ನ,5,2019(www.justkannada.in):  ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಪೂರೈಸಿದ ಹಿನ್ನೆಲೆ ನೂರುದಿನದ ಸಾಧನೆಯ ಪುಸ್ತಕವನ್ನ ಸಿಎಂ ಬಿಎಸ್ ಯಡಿಯೂರಪ್ಪ ಬಿಡುಗಡೆ ಮಾಡಿದರು.

ಪ್ರವಾಹ ನೆರೆ ಹಾವಳಿಯಿಂದ ಜನತೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ಸರ್ಕಾರದ ನೂರು ದಿನದ ಸಂಭ್ರಮವನ್ನ ಸರಳವಾಗಿ ಆಚರಿಸಲು ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದರು. ಈ ನಡುವೆ ನವೆಂಬರ್ 2ಕ್ಕೆ ಬಿಜೆಪಿ ಸರ್ಕಾರ ನೂರು ದಿನ ಪೂರೈಸಿದೆ. ಹೀಗಾಗಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರುದಿನದ ಸಾಧನೆ ಬಗ್ಎಗ ಪುಸ್ತಕ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಸಿಎಂ ಬಿಎಸ್ ವೈ,  ನಮ್ಮದು ಭ್ರಷ್ಟಾಚಾರ ಮುಕ್ತ ಸರ್ಕಾರ. ನೂರು ದಿನಗಳ ಅವಧಿಯಲ್ಲಿ ರೈತರಿಗೆ ಹೆಚ್ಚಿನ ಒತ್ತು ನೀಡಿದ್ದೇವೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ನೆರೆ ಸಂತ್ರಸ್ತರಿಗೆ ಸೂಕ್ತ ಸ್ಪಂದನೆ ನೀಡಿದ್ದೇವೆ.  ಆಡಳಿತ ಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ ಎಂದರು.

ಹಾಗೆಯೇ ಆರ್ ಸಿಇಪಿ ಒಪ್ಪಂದಕ್ಕೆ ಸಹಿ ಹಾಕದ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

Key words: BJP government-  CM BS Yeddyurappa -released – 100 day –achievement- book.