ಅನರ್ಹ ಶಾಸಕ ಆನಂದ್ ಸಿಂಗ್ ಕ್ಷೇತ್ರಕ್ಕೆ ಸಿಎಂ ಬಿಎಸ್ ವೈ ರಿಂದ ಬಂಪರ್ ಗಿಫ್ಟ್…

Promotion

ಬೆಂಗಳೂರು,ನ,10,2019(www.justkannada.in):  ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾದ ಅನರ್ಹ ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭರ್ಜರಿ ಗಿಫ್ಟ್ ನೀಡುತ್ತಿದ್ದಾರೆ. ಅಂತೆಯೇ ಅನರ್ಹ ಶಾಸಕ ಆನಂದ್ ಸಿಂಗ್ ಕ್ಷೇತ್ರ ಹೊಸಪೇಟೆಗೆ ಸಿಎಂ ಬಿಎಸ್ ವೈ 243 ಕೋಟಿ ರೂ ಅನುದಾನ ನೀಡಿದ್ದಾರೆ.

ಹೌದು,  ಅನರ್ಹ ಶಾಸಕ ಆನಂದ್ ಸಿಂಗ್ ಕ್ಷೇತ್ರ ಹೊಸಕೋಟೆಗೆ ಕುಡಿಯುವ ನೀರು ಯೋಜನೆಗೆ 242 ಕೋಟಿ ಅನುದಾನ ನೀಡಿದ್ದಾರೆ. ಪ್ರಸಕ್ತ ವರ್ಷದಲ್ಲಿ 75 ಕೋಟಿ ಅನುದಾನ ಸಿಗಲಿದೆ. 243 ಕೋಟಿ ರೂ, ಕಾಮಗಾರಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.

ತುಂಗಭದ್ರ ನದಿಯಿಂದ 18 ಕೆರೆ ಮತ್ತು 4 ಚೆಕ್ ಡ್ಯಾಂಗಳಿಗೆ ನೀರು ತುಂಬಿಸುವ ಯೋಜನೆಗೆ ಈ ಅನುದಾನವನ್ನ ಸಿಎಂ ಬಿಎಸ್ ವೈ ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗೆ ಅನರ್ಹ ಶಾಸಕ ಎಂಟಿಬಿ ನಾಗಾರಾಜ್ ಕ್ಷೇತ್ರಕ್ಕೆ ಅನುದಾನ ನೀಡಿದ್ದರು.  ಈ ಮೂಲಕ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆಗೇರಲು  ಕಾರಣರಾದ ಅನರ್ಹ ಶಾಸಕರಿಗೆ ಸಿಎಂ ಬಿಎಸ್ ವೈ ಭರ್ಜರಿ ಗಿಫ್ಟ್ ನೀಡುತ್ತಿದ್ದಾರೆ.

Key words: Bumper Gift – CM BS Yeddyurappa- disqualified MLA- Anand Singh-hospet