ರಾಜ್ಯಕ್ಕೆ 50 ಸಾವಿರ ಕೋಟಿ ವಿಶೇಷ ಅನುದಾನ ನೀಡುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದ ಸಿಎಂ ಬಿಎಸ್ ಯಡಿಯೂರಪ್ಪ…

ತುಮಕೂರು,ಜ,2,2019(www.justkannada.in): ರಾಜ್ಯಕ್ಕೆ 50 ಸಾವಿರ ಕೋಟಿ ವಿಶೇಷ ಅನುದಾನ ನೀಡುವಂತೆ ಪ್ರಧಾನಿ ಮೋದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದರು.

ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕೇಂದ್ರದ ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಎರೆಯುವ ಮೂಲಕ  ಪ್ರಧಾನಿ ಮೋದಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಗತಿ ಪರ ರೈತರಿಗೆ ಪ್ರಶಸ್ತಿ ನೀಡಲು ಕರ್ನಾಟಕ ಆಯ್ಕೆ ನಮ್ಮ ಹೆಮ್ಮೆಯ ವಿಷಯ. ಕೇಂದ್ರ ಸರ್ಕಾರ 2022 ಒಳಗೆ ರೈತರ ಆದಾಯ ದ್ವಿಗುಣಗೊಳಿಸಿವ ಗುರಿ ಹೊಂದಿದೆ. ಇದನ್ನ ತಲುಪಲು ರೈತರ ಆದಾಯಕ್ಕೆ ಉತ್ತಮ ಬೆಲೆ, ನದಿಜೋಡಣೆ ಯಂತಹ ಯೋಜನೆ ನೀಡಬೇಕು. ನೀರಾವರಿ ಯೋಜನೆ ಪೂರ್ಣಗೊಳಿಸಬೇಕು. ರಾಜ್ಯದಲ್ಲಿ ಭೀಕರ ಪ್ರವಾಹದಿಂದ ರಾಜ್ಯದಲ್ಲಿ 30 ಸಾವಿರ ಕೋಟಿ ನಷ್ಟವಾಗಿದೆ. ಪ್ರಧಾನಿ ಮೋದಿ ಅವರನ್ಗನ ಹಲವು ಬಾರಿ ಭೇಟಿ ಮಾಡಿ ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡಿದ್ದೇ. ಅದ್ರೆ ಅನುದಾನ ಬಿಡುಗಡೆ ಮಾಡಿಲ್ಲ. ಹೀಗಾಗಿ ರಾಜ್ಯಕ್ಕೆ 50 ಸಾವಿರ ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿ ಎಂದು ಮನವಿ ಮಾಡಿದರು.

ಕೃಷಿಗೆ ಹೆಚ್ಚು ಒತ್ತು ಕೊಡುವ ಸಂಕಲ್ಪವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಈ ಸಂಕಲ್ಪ ಈಡೇರಬೇಕಾದರೆ ನೀರಾವರಿಗೆ ಹೆಚ್ಚು ಒತ್ತು ಕೊಡಬೇಕು ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಕ್ಕರೆ ಪ್ರಕೃತಿ ವಿಕೋಪಗಳಾದಾಗ ಅದನ್ನು ತಡೆಯುವ ಶಕ್ತಿ ರೈತರಿಗೆ ಇದೆ. ರಾಜ್ಯದಲ್ಲಿ ಈ ಹಿಂದೆ ಪ್ರಾರಂಭವಾದ ನೀರಾವರಿ ಯೋಜನೆಗಳು ಪೂರ್ಣವಾಗಿಲ್ಲ. ಈ ಯೋಜನೆಗಳನ್ನು ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು.

 

Key words: CM BS Yeddyurappa -appealed – PM Modi – grant