ಸಚಿವರಿಗೆ ಸಿಎಂ ಮೇಲೆ ವಿಶ್ವಾಸ: ಸರ್ಕಾರ ಬೀಳಿಸುವ ವಿಪಕ್ಷಗಳ ಷಡ್ಯಂತ್ರಕ್ಕೆ ಅವಕಾಶ ಕೊಡಲ್ಲ- ಡಿಸಿಎಂ ಪರಮೇಶ್ವರ್..

Promotion

ಬೆಂಗಳೂರು,ಮೇ,25,2019(): ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಮೈತ್ರಿ ಮೈತ್ರಿ ಸರ್ಕಾರ ಮುಂದಿನ ನಾಲ್ಕು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಿದೆ ಎಂದು ಡಿಸಿಎಂ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಅನೌಪಚಾರಿಕ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾನಾಡಿದ ಡಿಸಿಎಂ ಪರಮೇಶ್ವರ್, ಇಂದಿನ ಸಭೆಯಲ್ಲಿ ಲೋಕಸಭೆ ಚುನಾವಣೆಯ ಒಟ್ಟಾರೆ ಫಲಿತಾಂಶ ರಾಜ್ಯ ಫಲಿತಾಂಶಗಳ ಕುರಿತು ಚಚರ್ೆ ನಡೆಸಲಾಯಿತು. ಲೋಕಸಭೆ ಚುನಾವಣಾ ಫಲಿತಾಂಶ ಕೇಂದ್ರ ಸರ್ಕಾರಕ್ಕೆ ನೀಡಿದ ಜನಾದೇಶವೇ ಹೊರತು ರಾಜ್ಯ ಸರ್ಕಾರಕ್ಕೆ ಅಲ್ಲ ಎಂದು ಸಚಿವ ಸಂಪುಟವು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ತಿಳಿಸಿದರು.

ಫಲಿತಾಂಶದ ನಂತರ ಸರ್ಕಾರದ ಕುರಿತು ಹೇಳಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಇಂದಿನ ಸಭೆಯಲ್ಲಿ ಎಲ್ಲಾ ಸಚಿವರು ಮುಖ್ಯಮಂತ್ರಿಗಳಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ಬೀಳಿಸಲು ವಿಪಕ್ಷ ನಡೆಯುವ ಷಡ್ಯಂತ್ರಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಅವರು ತಿಳಿಸಿದರು.

ಮೈತ್ರಿಸರ್ಕಾರ ಮುಂದಿನ ನಾಲ್ಕು ವರ್ಷಗಳಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಲಿದೆ. ಜನತೆಗೆ ನಿರಾಶೆ ಮಾಡುವುದಿಲ್ಲ ಎಂದು ಡಿಸಿಎಂ ಪರಮೇಶ್ವರ್ ನುಡಿದರು.

#dcmparameshwar #bangalore  #cmhdkumaraswamy