ಬಿಜೆಪಿಯ ಜಾಮೂನು ತಿನ್ನುತ್ತಿರುವ ಕುಮಾರಸ್ವಾಮಿ ಮುಂದೆ ವಿಷ ತಿನ್ನಲು ತಯಾರಿರುವುದು ಒಳ್ಳೆಯದು- ರಾಜ್ಯ ಕಾಂಗ್ರೆಸ್ ವ್ಯಂಗ್ಯ.

Promotion

ಬೆಂಗಳೂರು,ನವೆಂಬರ್,9,2023(www.justkannada.in):  ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳುವಾಗ ಜಾಮೂನು ನೀಡುತ್ತಾರೆ ನಂತರ ವಿಷ ಕೊಡುತ್ತಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಹೇಳಿಕೆ ಸಾಕಷ್ಟು ಚರ್ಚೆಯಾಗುತ್ತಿದ್ದು ಈ ಕುರಿತು ಟ್ವಿಟ್ ಮಾಡಿ ರಾಜ್ಯ ಕಾಂಗ್ರೆಸ್ ಘಟಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ , ಅಧಿಕಾರದ ಹಪಹಪಿಯಲ್ಲಿರುವ ಬಿಜೆಪಿ ಪಕ್ಷಕ್ಕೆ ಸೆಳೆಯುವಾಗ ಜಾಮೂನು ಕೊಡ್ತಾರೆ, ನಂತರ ವಿಷ ಕೊಡುತ್ತಾರೆ.. ಇದನ್ನು ಬಿಜೆಪಿಯವರೇ ಹೇಳಿದ್ದು. ಈಗ ಬಿಜೆಪಿಯ ಜಾಮೂನು ತಿನ್ನುತ್ತಿರುವ ಕುಮಾರಸ್ವಾಮಿಯವರು ಮುಂದೆ ವಿಷ ತಿನ್ನಲು ತಯಾರಿರುವುದು ಒಳ್ಳೆಯದು ಎಂದು ವ್ಯಂಗ್ಯವಾಡಿದೆ.

ಬಿಜೆಪಿಯವರು ಜಾಮೂನಿನ ಒಳಗೆ ವಿಷ ಬೆರೆಸಿರುತ್ತಾರೆ ಸತ್ಯ ವಲಸಿಗರಿಗೆ ಅರಿವಾ

 

ಗಿದೆ, ಮುಂದೆ ಕುಮಾರಸ್ವಾಮಿಯವರಿಗೂ ಅರಿವಾಗಲಿದೆ.. ಅರಿವಾಗುವುದರೊಳಗೆ ಜೆಡಿಎಸ್ ಪ್ರಾಣ ಹೋಗಿರುತ್ತದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

Key words: eat -poison – Kumaraswamy – BJP-jamun- Congress