ಸಿಎಂ ಬಿಎಸ್ ವೈ ನಿವಾಸಕ್ಕೆ ಶಾಸಕ ಆನಂದ್ ಸಿಂಗ್ ಭೇಟಿ: ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಚರ್ಚೆ…?

Promotion

ಬೆಂಗಳೂರು,ಡಿ,18,2019(www.justkannada.in):  ಉಪಚುನಾವಣೆಯಲ್ಲಿ ಗೆದ್ದು ಸರ್ಕಾರ ಸೇಫ್ ಮಾಡಿಕೊಂಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಇದೀಗ ಸಂಪುಟ ವಿಸ್ತರಣೆ ಜವಾಬ್ದಾರಿ ಜತೆಗೆ ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ.

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಉಪಚುನಾವಣೆ ನಂತರ ಚರ್ಚಿಸುವುದಾಗಿ ಭರವಸೆ ನೀಡಿದ್ದ ಹಿನ್ನೆಲೆ , ವಿಜಯನಗರ ಶಾಸಕ ಆನಂದ್ ಸಿಂಗ್ ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇನ್ನು ಈ ವೇಳೆ ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇನ್ನು ಪ್ರತ್ಯೇಕ ಜಿಲ್ಲೆಗೆ ಬಿಜೆಪಿ ಶಾಸಕ ಸೋಮಶೇಖರರೆಡ್ಡಿ ಸೇರಿ ಹಲವರು ವಿರೋಧ ವ್ಯಕ್ತಪಡಿಸಿದರೇ, ಇತ್ತ ಆನಂದ್ ಸಿಂಗ್ ವಿಜಯನಗರವನ್ನ ಪ್ರತ್ಯೇಕ ಜಿಲ್ಲೆಯಾಗಿ ಮಾಡಿಯೇ ಮಾಡುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಹೀಗಾಗಿ ಈ ವಿಚಾರ ಸಿಎಂ ಬಿಎಸ್ ವೈಗೆ ಸಂಕಷ್ಟ ಉಂಟು ಮಾಡಲಿದೆ.

Key words: MLA -Anand Singh –visits- CM BSY -residence