ಮೈಸೂರು ಮೇಯರ್ ಆಗಿ ಜೆಡಿಎಸ್ ನ ತಸ್ಲೀಮಾ ಹಾಗೂ ಉಪಮೇಯರ್ ಆಗಿ ಕಾಂಗ್ರೆಸ್ ನ ಶ್ರೀಧರ್ ಆಯ್ಕೆ ಬಹುತೇಕ ಖಚಿತ…

ಮೈಸೂರು,ಜ,18,2020(wwww.justkannnada.in): ಮೈಸೂರು ನಗರಪಾಲಿಕೆ ನೂತನ ಮೇಯರ್ ಆಗಿ ಜೆಡಿಎಸ್ ನ ತಸ್ಲೀಮಾ ಹಾಗೂ ಉಪಮೇಯರ್ ಆಗಿ ಕಾಂಗ್ರೆಸ್ ನ ಶ್ರೀಧರ್ ಆಯ್ಕೆ ಬಹುತೇಕ ಖಚಿತವಾಗಿದೆ.

ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದ 26 ನೇ ವಾರ್ಡಿನ ಪಾಲಿಕೆ ಸದಸ್ಯೆ ತಸ್ಲೀಮಾ ಮೇಯರ್ ಆಗುವುದು ಬಹುತೇಕ ಖಚಿತವಾಗಿದೆ  ಕಳೆದ ಭಾರಿ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದ ತಸ್ಲೀಮಾ ಈ ಬಾರಿ ಜೆಡಿಎಸ್ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಕಳೆದ ಅವಧಿಯಲ್ಲಿ ಪಡುವಾರಹಳ್ಳಿ ರಾಜೇಶ್ವರಿ ಸೋಮು, ಆರ್ ಲಿಂಗಪ್ಪ, ಎಂಜಿ ರವಿಕುಮಾರ್, ಭಾಗ್ಯವತಿ ಮೇಯರ್ ಆಗಿದ್ರು. ಈ ಭಾರಿ ಮತ್ತೆ ಚಾಮರಾಜ ಕ್ಷೇತ್ರಕ್ಕೆ ಮೇಯರ್ ಗಿರಿ ಒಲಿಯಲಿದೆ. ಮೈಸೂರು ಮಹಾನಗರ ಪಾಲಿಕೆ ಇತಿಹಾಸದಲ್ಲಿ ಮುಸ್ಲಿಂ ಮಹಿಳೆಗೆ ಅವಕಾಶ ಸಿಕ್ಕಿದೆ. ಇನ್ನು ಮೈಸೂರು ಮಹಾನಗರ ಪಾಲಿಗೆಯ ಉಪಮೇಯರ್ ಆಗಿ ಕಾಂಗ್ರೆಸ್ ನ ಶ್ರೀಧರ್ ಆಯ್ಕೆ ಬಹುತೇಕ ಖಚಿತವಾಗಿದೆ.

ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ…

ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಗೀತಾಶ್ರೀ ಯೋಗಾನಂದ್ ಹಾಗೂ ಉಪ ಮೇಯರ್ ಅಭ್ಯರ್ಥಿಯಾಗಿ ಶಾಂತಮ್ಮ ವಡಿವೇಲು ನಾಮಪತ್ರ ಸಲ್ಲಿಸಿದ್ದಾರೆ.  ಮೈಸೂರು ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಬಿವಿ ಮಂಜುನಾಥ್, ಪಾಲಿಕೆ ಸದಸ್ಯ ಶಿವಕುಮಾರ್ ಜತೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಭ್ಯರ್ಥಿಗಳಿಗೆ ಬಿಜೆಪಿ ಪಾಲಿಕೆ ಸದಸ್ಯರು ಸಾಥ್ ನೀಡಿದರು.

Key words:  mysore city corporation- mayor-electe -Taslima -Deputy Mayor – Sridhar -certain.