ಹೆಸರ ಹಿಂದೆ ಸಾ.ರಾ. ಇದ್ದವರೆಲ್ಲ ನನ್ನ ಸಹೋದರರಲ್ಲ: ಸಾಲಿಗ್ರಾಮ ಕೋಮು ಗಲಾಟೆ ಕುರಿತು ಸ್ಪಷ್ಟನೆ: ಹೆಚ್.ವಿಶ್ವನಾಥ್ ಬಗ್ಗೆ ಸಾಫ್ಟ್ ಕಾರ್ನರ್ ತೋರಿದ ಸಾ.ರಾ.ಮಹೇಶ್…

ಹೆಸರ ಹಿಂದೆ ಸಾ.ರಾ. ಇದ್ದವರೆಲ್ಲ ನನ್ನ ಸಹೋದರರಲ್ಲ: ಸಾಲಿಗ್ರಾಮ ಕೋಮು ಗಲಾಟೆ ಕುರಿತು ಸ್ಪಷ್ಟನೆ: ಹೆಚ್.ವಿಶ್ವನಾಥ್ ಬಗ್ಗೆ ಸಾಫ್ಟ್ ಕಾರ್ನರ್ ತೋರಿದ ಸಾ.ರಾ.ಮಹೇಶ್…

ಮೈಸೂರು,ಡಿ,17,2019(www.justkannada.in): ಸಾಲಿಗ್ರಾಮ ಕೋಮು ಗಲಾಟೆ ಪ್ರಕರಣ ಸಂಬಂಧ ಪ್ರಕರಣ ಸಂಬಂಧ ಇನ್ನೂ ಯಾವುದೇ ಶಾಂತಿ ಸಭೆ ಏರ್ಪಟ್ಟಿಲ್ಲ ಎಂದು  ಮಾಜಿ ಸಚಿವ ಸಾ.ರಾ.ಮಹೇಶ್ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ಸಾ.ರಾ ಮಹೇಶ್, ಹೆಸರ ಹಿಂದೆ ಸಾ.ರಾ. ಇದ್ದವರೆಲ್ಲ ನನ್ನ ಸಹೋದರರಲ್ಲ. ಸಾಲಿಗ್ರಾಮದಲ್ಲಿ ಯಾರ ತಂದೆ ರಾಮೇಗೌಡ ಆಗಿರುತ್ತಾರೋ ಅವರ ಹೆಸರ ಹಿಂದೆ‌ ಸಾ.ರಾ ಎಂದು ಇರುತ್ತೆ. ಪ್ರಕರಣದಲ್ಲಿ. ಒಬ್ಬ ಸಹೋದರ ಜಿಪಂ‌ ಸದಸ್ಯ ಆಗಿದ್ದಾನೆ. ಈಗ ಪ್ರಕರಣದಲ್ಲಿ ಸಿಲುಕಿರುವ ಸಹೋದರ ಯಾರು ಅಂತಲೇ ಜನರಿಗೆ ಗೊತ್ತಿರಲಿಲ್ಲ. ಆದರೆ ಈಗ ಎಲ್ಲರಿಗೂ ಆತನ‌ ಬಗ್ಗೆ ಗೊತ್ತಾಗುವಂತೆ ಆಗಿದೆ. ಇಡೀ ಪ್ರಕರಣವನ್ನು ವಿರೋಧ ಪಕ್ಷದ ಕೆಲವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಾನು ಶಾಸಕ ಆಗುವುದಕ್ಕಿಂತಲೂ‌ ಮುಂಚಿನಿಂದ ಸಾಲಿಗ್ರಾಮದಲ್ಲಿ ಇಂತಹ ಘಟನೆಗಳು ನಡೆದಿವೆ. ಹಿಂದೆ ಗೋಲಿಬಾರ್ ಸಹ ಆಗಿದೆ. ನನ್ನನ್ನು ಶಾಸಕ ಮಾಡಿದ ಮೇಲೆ ಸ್ವಲ್ಪ ಹತೋಟಿಗೆ ಬಂದಿದೆ. ಎರಡೂ ಕಡೆಯವರು ಹಲವು ಮಂದಿ ತಲೆ ಮರೆಸಿಕೊಂಡಿದ್ದಾರೆ. ಅವರೆಲ್ಲ ಸಿಕ್ಕ ನಂತರ ಒಂದು ಕಡೆ ಕುಳಿತು ಸಭೆ ಮಾಡಿ ತೀರ್ಮಾನ ಮಾಡುತ್ತೇವೆ. ಎಂದರು.

ಎಚ್.ವಿಶ್ವನಾಥ್ ಬಗ್ಗೆ ಸಾಫ್ಟ್ ಕಾರ್ನರ್..

ಚುನಾವಣೆ ನಂತರ ವಿಶ್ವನಾಥ್ ವಿರುದ್ಧ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದಿದ್ದ ಮಾಜಿ ಸಚಿವ  ಸಾ.ರಾ.ಮಹೇಶ್ ಇದೀಗ ಎಚ್.ವಿಶ್ವನಾಥ್ ಬಗ್ಗೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಸದ್ಯ ವಿಶ್ವನಾಥ್ ಅವರೇ ನೋವಿನಲ್ಲಿದ್ದಾರೆ.  ಈ ಸಂದರ್ಭದಲ್ಲಿ ಅದೆಲ್ಲಾ ಬೇಡ, ಮುಂದೆ ನೋಡೋಣ‌ ಬಿಡಿ ಎಂದು ಹುಣಸೂರು ಪರಾಜಿತ ಅಭ್ಯರ್ಥಿ ಎಚ್.ವಿಶ್ವನಾಥ್ ಬಗ್ಗೆ ಮರುಕ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್‌ ನಿಂದ ಮತ್ತಿಬ್ಬರು ಶಾಸಕರು ಬಿಜೆಪಿ ಸೇರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಾ.ರಾ ಮಹೇಶ್,  ಸದ್ಯ ಜೆಡಿಎಸ್‌ ಪಕ್ಷವನ್ನು ಯಾರೂ ಬಿಟ್ಟು ಹೋಗುತ್ತಿಲ್ಲ. ಇದು‌ ಸತ್ಯಕ್ಕೆ‌ ದೂರವಾದ ವಿಚಾರ. ಎಲ್ಲರೊಂದಿಗೆ ನಿತ್ಯ ಮಾತನಾಡುತ್ತಲೇ ಇದ್ದೇವೆ. ಹಲವರು ನಿನ್ನೆ ಕೂಡ ಕುಮಾರಸ್ವಾಮಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ವಿಚಾರದ ಬಗ್ಗೆ ಚರ್ಚೆ ಕೂಡ ನಡೆಯುತ್ತಿದೆ ಎಂದರು.

Key words: mysore- former minister- sa.ra Mahesh-H. Vishwanath