ಮೈಸೂರು ರಸ್ತೆಯಿಂದ ಕೆಂಗೇರಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಆಗಸ್ಟ್ 29ರಂದು ಚಾಲನೆ

Promotion

ಬೆಂಗಳೂರು, ಆಗಸ್ಟ್ 22, 2021 (www.justkannada.in): ಮೈಸೂರು ರಸ್ತೆಯಿಂದ ಕೆಂಗೇರಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಆಗಸ್ಟ್ 29ರಂದು ಚಾಲನೆ ಸಿಗಲಿದೆ.

ಹೌದು. ಮೈಸೂರು ರಸ್ತೆಯಿಂದ ಕೆಂಗೇರಿ ಮಾರ್ಗ ಮೆಟ್ರೋ ಸಂಚಾರ ಆಗಸ್ಟ್ 29ರಂದು ಲೋಕಾರ್ಪಣೆಯಾಗಲಿದೆ.

ಒಟ್ಟು 7.53 ಕೀ ಮೀಟರ್ ಉದ್ದದ ಮೆಟ್ರೋ ಮಾರ್ಗ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗಲಿದೆ. ನೇರಳೆ ಮಾರ್ಗದ ವಿಸ್ತರಿತ ಮಾರ್ಗದಲ್ಲಿ ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ಒಟ್ಟು ದೂರವಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಲಿದ್ದು, ವಿಸ್ತರತ ಮಾರ್ಗದಲ್ಲಿ ನಾಯಂಡಹಳ್ಳಿ, ಆರ್.ಆರ್ ನಗರ, ಜ್ಞಾನಭಾರತಿ, ಪಟ್ಟಣಗೆರೆ ಮೈಲಸಂದ್ರ, ಕೇಂಗೇರಿ ಬಸ್ ನಿಲ್ದಾಣದ ಮಾರ್ಗದಲ್ಲಿ ಮೆಟ್ರೋ ಸಂಚಾರವಿರಲಿದೆ.