ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ತನಿಖೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆದೇಶ

Promotion

ಬೆಂಗಳೂರು, ಆಗಸ್ಟ್ 18, 2019 (www.justkannada.in): ಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.

ರಾಜ್ಯದ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳ ಪೋನ್ ಕದ್ದಾಲಿಕೆ ಪ್ರಕರಣದ ಸಂಬಂಧ ರಾಜ್ಯದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಕುರಿತಂತೆ ಆರೋಪ-ಪ್ರತ್ಯಾರೋಪ ಮಾಡುತ್ತಿರುವ ರಾಜಕೀಯ ನಾಯಕರು, ಪ್ರಕರಣ ಕುರಿತಂತೆ ಸೂಕ್ತ ತನಿಖೆ ನಡೆಸಲು ಒತ್ತಾಯಿಸಿದ್ದರು.

ಈ ಸಂಬಂಧ ಬಿಜೆಪಿಯ ಆರ್ ಅಶೋಕ್ ಪೋನ್ ಕದ್ದಾಲಿಕೆ ಪ್ರಕರಣ ಕುರಿತಂತೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಮನವಿ ಮಾಡಿದ್ದರು.

ಇವರಲ್ಲದೇ ಮಾಜಿ ಗೃಹ ಸಚಿವ ಎಂ ಬಿ ಪಾಟೀಲ್ ಕೂಡ ನನ್ನ ಕೈವಾಡವಿದ್ದರೇ ತನಿಖೆಗೆ ಆದೇಶಿಸಲಿ ಎಂದು ಸವಾಲ್ ಹಾಕಿದ್ದರು. ಕೇಂದ್ರ ಸಚಿವ ಡಿವಿ ಸದಾನಂದಗೌಡ ಕೂಡ ತನಿಖೆ ನಡೆಸಲಿ ಎಂದು ತಿಳಿಸಿದ್ದರು. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ.