ಸಾಮಾಜಿಕ ನ್ಯಾಯದ ಪರವಾಗಿರುವ ಪೂರ್ಣಿಮಾ ಅವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ- ಸಿಎಂ ಸಿದ್ದರಾಮಯ್ಯ ಅಭಯ

Promotion

ಬೆಂಗಳೂರು ಅಕ್ಟೋಬರ್,20,2023(www.justkannada.in): ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅಭಯ ನೀಡಿದರು.

ಅತ್ಯಂತ ಹಿಂದುಳಿದ ವರ್ಗ ಗೊಲ್ಲ ಸಮುದಾಯದ ಹಿರಿಯ ಕಾಂಗ್ರೆಸ್ ಮುಖಂಡರಾದ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಕೃಷ್ಣಪ್ಪ ಮತ್ತು ಕೃಷ್ಣಪ್ಪ ಅವರ ಅಳಿಯ ಶ್ರೀನಿವಾಸ್, ಕೆ.ನರಸಿಂಹನಾಯಕ್ ಸೇರಿದಂತೆ 750 ಕ್ಕೂ ಹೆಚ್ಚು ಬಿಜೆಪಿಯ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು.

ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್ . ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ ಎಂದರು. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.

ಸುಳ್ಳೇ ಬಿಜೆಪಿಯ ಮನೆ ದೇವರು

ಸುಳ್ಳು ಬಿಜೆಪಿಯ ಮನೆ ದೇವರು. ಸುಳ್ಳುಗಳ ಮೂಲಕ ಜನರನ್ನು ಯಾಮಾರಿಸಿ, ದಿಕ್ಕು ತಪ್ಪಿಸಿ, ಹಾದಿ ತಪ್ಪಿಸಿ ಕೆಟ್ಟ ರಾಜಕಾರಣ ಮಾಡುತ್ತದೆ. ಅಧಿಕಾರಿ ಇದ್ದಾಗಲೂ ಸುಳ್ಳು, ಅಧಿಕಾರ ಇಲ್ಲದಿದ್ದಾಗಲೂ ಸುಳ್ಳುಗಳ ಮೇಲೆ ಅವಲಂಬನೆಯಾಗಿರುತ್ತದೆ. ನಿಮ್ಮ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ನಿಮ್ಮನ್ನೇ ಯಾಮಾರಿಸುವವರನ್ನು ಈ ಕ್ಷಣದಿಂದಲೇ ತಿರಸ್ಕರಿಸಿ ಎಂದು ಸಿಎಂ ಸಿದ್ಧರಾಮಯ್ಯ ಕರೆ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಸಚಿವ ಡಿ.ಸುಧಾಕರ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿದಂತೆ ಗೊಲ್ಲ ಸಮುದಾಯದ ರಾಜ್ಯ ಮುಖಂಡರೂ , ವಿಧಾನ‌ ಪರಿಷತ್ ಸದಸ್ಯರೂ ಆದ ನಾಗರಾಜ ಯಾದವ್ ಸೇರಿದಂತೆ ಹಲವು ಮಂದಿ ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Key words: Purnima- join-congress- CM Siddaramaiah

ENGLISH SUMMARY…

Poornima and Srinivas are advocates of social justice. Politically, Poornima was in the BJP reluctantly

Will not let political injustice happen to Poornima: CM Siddaramaiah assures

Congress is the only national party that stands for the values ​​of constitution and social justice: Chief Minister Siddaramaiah

Bangalore October 20: Poornima and Srinivas are advocates of social justice. They were in BJP reluctantly. Now that they have joined Congress, we will not allow political injustice to happen to them, Chief Minister Siddaramaiah said.

Poornima Krishnappa, daughter of late A. Krishnappa, a senior Congress leader from the most backward OBC Golla community, and Krishnappa’s son-in-law Srinivas spoke after inducting more than 750 BJP leaders, including leader K. Narasimhanayak, into the Congress party.

Congress is the only national party that stands for the Constitution and the values ​​of social justice. A. Krishnappa, Poornima and Srinivas have been working since the beginning as the voice of the deprived of social justice. Congress is a party that believes in social justice. BJP is a party that believes in caste discrimination. He called upon the poor of all castes and the Shudra community to understand this properly and take a political stand.

Poornima, Srinivas and their supporters are clearly convinced that there is no social justice in the BJP. He said that it is very difficult for those who have taken a stand in favor of social justice in BJP. That is why so many backward communities are joining the Congress today, the CM opined.

The event held at the KPCC office was presided over by KPCC President D.K Shivakumar, former Chief Minister Veerappa Moily, Minister D. Sudhakar, State Government’ s Delhi representative T. B. Jayachandra and MLC and Golla community leader Nagaraj Yadav and leaders belonging to other backward classes were present.

box

Lie is BJP’s deity

Lie is BJP’s deity. It misleads people through lies and does dirty politics. They lie when they are in power and even when they are not in power they are dependent on lies. The Chief Minister called upon people to reject those who betray people’s trust and deceive them.