ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಜಯಂತಿ ಪ್ರಯುಕ್ತ  ಮೃಗಾಲಯಕ್ಕೆ 1 ಲಕ್ಷ ರೂ. ಚೆಕ್

Promotion

ಮೈಸೂರ, ಆಗಸ್ಟ್, 25, 2020(www.justkannada.in) : ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 105ನೇ ಜಯಂತಿಯು ಆ.29ರಂದು ನಡೆಯಲಿದ್ದು, ಜಯಂತಿ ಪ್ರಯುಕ್ತ ಈ ಬಾರಿಯು ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ 1 ಲಕ್ಷ ರೂ. ನೀಡಲಾಯಿತು.

jk-logo-justkannada-logo
ಶ್ರೀಗಳ ಜಯಂತಿಯಂದು ಕಳೆದ ಹತ್ತುವರ್ಷಗಳಿಂದ ಮೃಗಾಲಯದ ಪಶು-ಪಕ್ಷಿಗಳ ಆಹಾರದ ನಿರ್ವಹಣೆಗಾಗಿ 1 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. ಹಾಗೆಯೇ, ಶ್ರಿಮಠದಿಂದ ಶ್ರೀ ಚಾಮರಾಜೇಂದ್ರ ಮೃಗಾಲಯ ಉಪಅರಣ್ಯ ಸಂರಕ್ಷಣಾಧಿಕಾರಿ, ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ಜೆಎಸ್‌ಎಸ್ ಮಹಾವಿದ್ಯಾಪೀಠದ ಆಡಳಿತ ವಿಭಾಗದ ನಿರ್ದೇಶಕ ಶಂಕರಪ್ಪ ಒಂದು ಲಕ್ಷ ರೂ. ಚೆಕ್ ಅನ್ನು ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಪ್ರಾಧಿಕಾರದ ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಪಿ.ರವಿ, ಜೆಎಸ್‌ಎಸ್ ಮಹಾವಿದ್ಯಾಪೀಠದ ಪ್ರೊ.ಮೊರಬದ ಮಲ್ಲಿಕಾರ್ಜುನ, ಬಿ.ನಿರಂಜನಮೂರ್ತಿ ಉಪಸ್ಥಿತರಿದ್ದರು.

key words ; Shree-Shivaratri-Rajendra-Swamy’s-Jayanti-1 lakh-zoo-Check