ಮುರುಘಾಶ್ರೀಗಳಿಂದ ಕ್ಷಮಿಸಲಾರದ ಅಪರಾಧ: ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷಿಸಿರಲಿಲ್ಲ-ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಉಡುಪಿ,ನವೆಂಬರ್,8,2022(www.justkannada.in): ಅಪ್ರಾಪ್ತ ವಿದ್ಯಾರ್ಥಿನೀಯರಿಗೆ ಲೈಂಗಿಕ ಕಿರುಕುಳ ಆರೋಪ ಪೋಕ್ಸೋ ಪ್ರಕರಣದಲ್ಲಿ  ಚಿತ್ರದುರ್ಗದ ಮುರುಘಾ ಶ್ರೀ ಬಂಧನ  ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಚಿತ್ರದುರ್ಗ ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು  ಹೇಳಿದ್ದಾರೆ.

ಇದೇ ವೇಳೆ  ಚುನಾವಣೆ ಗೆದ್ದು ಖರ್ಗೆಗೆ ಗಿಫ್ಟ್ ನೀಡುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನ ತಮ್ಮ ಜೇಬಿನಲ್ಲಿದ್ದಾರೆಂಬ ಭಾವನೆ ಮನಸ್ಸಲ್ಲಿದ್ದಂತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ. ಸಿದ್ದರಾಮಯ್ಯರಿಂದ ಬಿಜೆಪಿ ಗೆಲುವನ್ನು ತಡೆಯಲು ಅಸಾಧ್ಯ ಎಂದು ಹೇಳಿದರು.

BJP ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾನು ಹಾಗೂ ಸಿಎಂ ಕರಾವಳಿ ಭಾಗದಲ್ಲಿ ಪ್ರವಾಸ ಮಾಡಿದ್ದೇವೆ. ನಮಗೆ ಹಿಂದೆಂದೂ ಇಲ್ಲದ ಸ್ವಾಗತ ಸಿಕ್ಕಿದೆ. ಕರಾವಳಿ ಭಾಗದಲ್ಲಿ ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು ಗೆಲ್ಲುತ್ತಾರೆ. ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.

Key words: unforgivable-crime – Muruga shri-Former CM -BS Yeddyurappa