Tuesday, September 29, 2026

BDA Apartments

ಉತ್ತರಾಖಂಡ್ ನಲ್ಲಿ ಏಕರೂಪ ನಾಗರೀಕ ಸಂಹಿತೆ ಮಸೂದೆ ಮಂಡನೆ BDA JK_Adv BDA Adv
Home Front Page ಉತ್ತರಾಖಂಡ್ ನಲ್ಲಿ ಏಕರೂಪ ನಾಗರೀಕ ಸಂಹಿತೆ ಮಸೂದೆ ಮಂಡನೆ.

ಉತ್ತರಾಖಂಡ್ ನಲ್ಲಿ ಏಕರೂಪ ನಾಗರೀಕ ಸಂಹಿತೆ ಮಸೂದೆ ಮಂಡನೆ.

ಡೆಹ್ರಾಡೂನ್,ಫೆಬ್ರವರಿ,6,2024(www.justkannada.in):  ಉತ್ತರಾಖಂಡ್ ವಿಧಾನಸಭೆಯಲ್ಲಿ ಏಕರೂಪ ನಾಗರೀಕ ಸಂಹಿತೆ ಮಸೂದೆಯನ್ನ ಮಂಡನೆ ಮಾಡಲಾಗಿದೆ.

ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಈ ಮೂಲಕ ಏಕರೂಪ ನಾಗರೀಕ ಸಂಹಿತೆ ಜಾರಿ ನಿಟ್ಟಿನಲ್ಲಿ ಉತ್ತರಾಖಂಡ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.  ಈ ಏಕರೂಪ ನಾಗರಿಕ ಸಂಹಿತೆಯಲ್ಲಿ ಯಾವುದೇ ಜಾತಿ, ಧರ್ಮ, ಪ್ರಾಂತ್ಯವೆಂಬ ಬೇಧವಿರುವುದಿಲ್ಲ, ದೇಶದ ಸರ್ವರಿಗೂ ಒಂದೇ ಕಾನೂನು ಅನ್ವಯಿಸುತ್ತದೆ. ಇದರ ಅಡಿಯಲ್ಲಿ ವಿವಾಹ, ವಿಚ್ಛೇದನ, ಉತ್ತರಾಧಿಕಾರ, ದತ್ತು ಸ್ವೀಕಾರದ ನಿಯಮಗಳು ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಒಂದೇ ಆಗಿರುತ್ತದೆ.ಉತ್ತರಾಖಂಡ್ ನಲ್ಲಿ ಏಕರೂಪ ನಾಗರೀಕ ಸಂಹಿತೆ ಮಸೂದೆ ಮಂಡನೆ uttarkhand

ಈ ಮಸೂದೆಯಿಂದ ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರೈಸ್ತ ಹೀಗೆ ವಿವಿಧ ಧರ್ಮಗಳಿಗೆ ಆ ಧರ್ಮದ ವೈಯಕ್ತಿಕ ಕಾನೂನುಗಳಿದ್ದು, ಅವೆಲ್ಲವೂ ಏಕರೂಪ ಕಾಯಿದೆ ಅಡಿಯಲ್ಲಿಯೇ ಇನ್ನುಮುಂದೆ ಬರಲಿವೆ. ಕಳೆದ ಭಾನುವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸಚಿವ ಸಂಪುಟವು ನಡೆಸಿದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು. ಹಾಗೆಯೇ ಸಚಿವ ಸಂಪುಟ ಮಸೂದೆ ಮಂಡನೆಗೆ ಒಪ್ಪಿಗೆಯನ್ನೂ ನೀಡಿತ್ತು.

Key words: Uniform Civil Code Bill – Uttarakhand-assembly