ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರ: ತಮ್ಮ ಹೆಸರು ಕೇಳಿ ಬಂದಿರುವ ಕುರಿತು ಸಂಸದ ಬಿವೈ  ರಾಘವೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ.

ಶಿವಮೊಗ್ಗ,ಜುಲೈ,7,2021(www.justkannada.in):  ಇಂದು ಸಂಜೆ 6 ಗಂಟೆಗೆ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು 20 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಮಧ್ಯೆ ಕೇಂದ್ರ ಮಂತ್ರಿಗಿರಿ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಂಸದ ಬಿವೈ ರಾಘವೇಂದ್ರ ಪ್ರತಿಕ್ರಿಯಿಸಿದ್ದಾರೆ.jk

ಶಿವಮೊಗ್ಗದಲ್ಲಿ ಇಂದು ಈ ಬಗ್ಗೆ ಮಾತನಾಡಿರುವ ಬಿವೈ ರಾಘವೇಂದ್ರ, ನನಗೆ ಸಚಿವ ಸ್ಥಾನ ಸಿಗುವ ಯಾವುದೇ ಮಾಹಿತಿ ಇಲ್ಲ. ಪ್ರಧಾನಿ ಮೋದಿ ನೇತೃತ್ವದಲ್ಲಿ ಉತ್ತಮ  ಪರಿಣಾಮಕಾರಿ ಆಡಳಿತಕ್ಕಾಗಿ ಸಂಪುಟ ವಿಸ್ತರಣೆ ಮಾಡಲಾಗುತ್ತಿದೆ. ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬುದನ್ನ ವರಿಷ್ಠರು ನಿರ್ಧರಿಸುತ್ತಾರೆ. ಕೇಂದ್ರ, ರಾಜ್ಯ ನಾಯಕರು ನಿರ್ಧರಿಸುತ್ತಾರೆ ಎಂದರು.

ನಾಯಕತ್ವ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಬಿವೈ ರಾಘವೇಂದ್ರ, ನಾಯಕತ್ವ ಬದಲಾವಣೆ ಬಗ್ಗೆ ಈಗಾಗಲೇ ರಾಜ್ಯ ಬಿಜೆಪಿ ಉಸ್ತುವಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೆಲವರು ನೀಡುತ್ತಿರುವ ಹೇಳಿಕೆಗಳನ್ನ ವರಿಷ್ಠರು ಗಮನಿಸುತ್ತಿದ್ದಾರೆ ಎಂದರು.

Key words:  Union Cabinet –expansion-MP -BY Raghavendra