ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.

ನವದೆಹಲಿ ಫೆಬ್ರುವರಿ,8,2024(www.justkannada.in): ಹಿಂದಿನ ಯುಪಿಎ ಅವಧಿಯಲ್ಲಿನ ಆರ್ಥಿಕ ಪರಿಸ್ಥಿತಿ ಮತ್ತು ಈಗಿನ ಎನ್ ಡಿಎ ಸರ್ಕಾರದ ಅವಧಿಯಲ್ಲಿನ ಆರ್ಥಿಕ ಪರಿಸ್ಥಿತಿ ಕುರಿತು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ವೇತಪತ್ರ ಹೊರಡಿಸಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿನ ವೈಪಲ್ಯಗಳನ್ನ ಎತ್ತಿ ತೋರಿಸುವ ಸಲುವಾಗಿ ಲೋಕಸಭೆಯಲ್ಲಿ ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶ್ವೇತಪತ್ರವನ್ನ ಮಂಡಿಸಿದ್ದಾರೆ.

ಈ ವೇಳೆ ಮಾತನಾಡಿರುವ ಅವರು, ಯುಪಿಎ ಅವಧಿಯಲ್ಲಿ ರೂಪಾಯಿ ಮೌಲ್ಯ ಕುಸಿದಿತ್ತು. ಯುಪಿಎ ಅವಧಿಯಲ್ಲಿ 2ಜಿ ಹಗರಣ. ಎನ್ ಡಿಎ ಅವಧಿಯಲ್ಲಿ 5ಜಿ ಸೇವೆ ಒದಗಿಸುತಿದ್ದೇವೆ. ಯುಪಿಎ ಅವಧಿಯಲ್ಲಿ ಬ್ಯಾಂಕಿಂಗ್ ಕ್ಷೇತ್ರ  ಸಂಕಷ್ಟದಲ್ಲಿತ್ತು. ಎನ್ ಡಿಎ ಸರ್ಕಾರದ ಅವಧಿಯಲ್ಲಿ ಆರ್ಥಿಕ ಸ್ಥಿತಿ ಸದೃಢವಾಗಿದೆ. ಎನ್ ಡಿಎ ಅವಧಿಯಲ್ಲಿ ಹಗರಣ ಮುಕ್ತ ಆಡಳಿತ ನೀಡಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

2004ರಿಂದ 2014ರವರೆಗೆ 10 ವರ್ಷ ಯುಪಿಎ ಅಧಿಕಾರದಲ್ಲಿತ್ತು. ಇದಾದ ನಂತರ 2014ರಿಂದ 2024, ಇಲ್ಲಿವರೆಗೆ 10 ವರ್ಷ ಎನ್​ಡಿಎ ಆಡಳಿತ ಇದೆ. ಈ ಎರಡೂ ಆಡಳಿತದಲ್ಲಿ ಆರ್ಥಿಕ ನಿರ್ವಹಣೆ ಹೇಗಿತ್ತು, ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂದು ವಿವರಿಸಿ ಸರ್ಕಾರ ಶ್ವೇತಪತ್ರ ಹೊರಡಿಸಿದೆ.

Key words: Union Finance Minister- Nirmala Sitharaman -presented – White Paper – LokSabha.