ಪ.ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ಖಚಿತ- ಕೇಂದ್ರ ಗೃಹ ಸಚಿವ ಅಮಿತ್ ಶಾ

ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ಪಶ್ಚಿಮ ಬಂಗಾಳದಲ್ಲಿ ದೀದಿ ಸರ್ಕಾರ ಕೊನೆಗೊಳ್ಳಲಿದೆ. ಬಿಜೆಪಿ ಅಧಿಕಾರಕ್ಕೆ ಬರೋದು ಖಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮೇ 4 ರಂದು ಪಶ್ಚಿಮ ಬಂಗಾಳದಲ್ಲಿ ಸುನಾಮಿ ಸೃಷ್ಠಿಸಲಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ಖಚಿತ. ಮೊದಲ ಹಂತದಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದೆ ಈ ಬಾರಿ ಬಿಜೆಪಿ ಶೇಕಡವಾರು ಮತದಲ್ಲೂ ಏರಿಕೆ ಆಗಲಿದೆ ಮೊದಲ ಹಂತದಲ್ಲಿ 152 ಸ್ಥಾನಗಳ ಪೈಕಿ 110 ಗೆಲ್ಲುವ ವಿಶ್ವಾಸವಿದೆ ಎಂದರು.

ಈ ಬಾರಿ ಜನ ಬದಲಾವಣೆ ಬಯಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ದೀದಿ ಸರ್ಕಾರ ಕೊನೆಗೊಳ್ಳಲಿದೆ. ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ. ನಾವು ಅಧಿಕಾರಕ್ಕೆ ಬಂದರೆ ಸಮಗ್ರ ಬಂಗಾಳದ ಅಭಿವೃದ್ದಿಗೆ ಶ್ರಮಿಸುತ್ತೇವೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಭ್ರಷ್ಟರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ.  ಮಹಿಳೆಯರ ಸುರಕ್ಷತೆ, ಭದ್ರತೆ, ರಕ್ಷಣೆಗೆ ಒತ್ತು ನೀಡುತ್ತೇವೆ. ಮಮತಾ ಬ್ಯಾನರ್ಜಿ ಸರ್ಕಾರದಿಂದ ಜನತೆ ಬೇಸತ್ತಿದ್ದಾರೆ ಮಮತ ಬ್ಯಾನರ್ಜಿ ಅವರನ್ನ ಮನೆಗೆ ಕಳಿಸಲು ಜನ ನಿರ್ಧರಿಸಿದ್ದಾರೆ  ಬಂಗಾಳದಲ್ಲಿ ಉತ್ತಮ ಆಡಳಿತದ ಹೊಸ ಯುಗ ಆರಂಭವಾಗಲಿದೆ ಎಂದು ಅಮಿತ್ ಶಾ ಹೇಳಿದರು.

Key words: BJP,  power,  West Bengal, Union Home Minister, Amit Shah