ಬೆಂಗಳೂರಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ರಾಜ್ಯ ಬಿಜೆಪಿ ನಾಯಕರಿಂದ ಸ್ವಾಗತ…

ಬೆಂಗಳೂರು,ಜನವರಿ,16,2021(www.justkannada.in):  ರಾಜ್ಯದಲ್ಲಿ  ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ  ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತ ಕೋರಿದರು.jk-logo-justkannada-mysore

ಕೇಂದ್ರ ಗೃಹ ಸಚಿವ ಅಮಿತ್ ಶಾ  ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು ಇಂದು ನವದೆಹಲಿಯಿಂದ  ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಮಿತ್ ಶಾರಿಗೆ ಸಿಎಂ ಯಡಿಯೂರಪ್ಪ ಅವರು ಗುಲಾಬಿ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದ ಗೌಡ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿ ಸಚಿವರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇದೀಗ ಅಮಿತ್ ಶಾ ಭದ್ರಾವತಿಯತ್ತ ಪ್ರಯಾಣ ಬೆಳೆಸಿದ್ದು ಸಿಎಂ ವೈ ಸಹ ಅವರ ಜತೆ ತೆರಳುತ್ತಿದ್ದಾರೆ ಎನ್ನಲಾಗಿದೆ.

Key words: Union Home Minister- Amit Shah – arrival –Bengaluru-welcome