ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ-ಕೇಂದ್ರ ಗೃಹಸಚಿವ ಅಮಿತ್ ಶಾ ವಿಶ್ವಾಸ.

ನವದೆಹಲಿ,ಫೆಬ್ರವರಿ,14,2023(www.justkannada.in): ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ, ಪ್ರತಿಪಕ್ಷಗಳು ದೇಶದ ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಈ ಹಿಂದೆ ಅಧಿಕಾರದಲ್ಲಿದ್ದ ಪಕ್ಷಗಳಿಗೆ ಜನತೆ ತಕ್ಕ ಉತ್ತರ ನೀಡಿದ್ದಾರೆ . ನಮ್ಮಸರ್ಕಾರದ ಜನಪರ ಯೋಜನೆಗಳಿಗೆ  ಜನರು ಮನ್ನಣೆ ನೀಡಿದಾರೆ ಎಂದರು.

ಮುಂಬರುವ 2024ರ ಲೋಕಸಭಾ ಚುನಾವಣೆಯನ್ನ  ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎದುರಿಸುತ್ತೇವೆ. ಆ ಚುನಾವಣೆಯಲ್ಲೂ ಗೆಲುವು ಸಾಧಿಸಿ ಎನ್​ಡಿಎ ಸರ್ಕಾರ ಸತತ ಮೂರನೇ ಬಾರಿ ಅಧಿಕಾರ ಹಿಡಿಯುತ್ತದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರತಿಸ್ಪರ್ಧೆಯೇ ಇಲ್ಲ. ಪಿಎಂ ಮೋದಿಗೆ ಇಡೀ ದೇಶದ ಬೆಂಬಲ ಇದೆ. ಪ್ರಧಾನಿ ಮೋದಿ ದೇಶದ ಜನರ ಹೃದಯ ಗೆದ್ದಿದ್ದಾರೆ ಎಂದು ಅಮಿತ್ ಶಾ ಹೇಳಿದರು.

Key words: Union -Home Minister- Amit Shah – BJP -come – power – 4 states