ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಚರ್ಚಿಸಿದ ಮಾಜಿ ಸಿಎಂ ಬಿಎಸ್ ವೈ.

ಬೆಂಗಳೂರು,ಆಗಸ್ಟ್ 4,2022(www.justkannada.in):  ರಾಜ್ಯ ಪ್ರವಾಸ ಕೈಗೊಂಡು ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ  ಅಮಿತ್ ಶಾ ವಾಸ್ತವ್ಯ ಹೂಡಿದ್ದು ಅಮಿತ್ ಶಾರನ್ನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಚರ್ಚಿಸಿದ್ದಾರೆ. ಅಲ್ಲದೆ ಇಬ್ಬರು ನಾಯಕರು ಜೊತೆಯಲ್ಲೇ ಉಪಹಾರ ಸೇವನೆ ಮಾಡಿದರು.

ಇಂದು ಹೋಟೆಲ್ ಗೆ ಬರುವಂತೆ ನಿನ್ನೆಯೇ ಅಮಿತ್ ಶಾ ಅವರು ತಿಳಿಸಿದ್ದರು. ಇನ್ನು ಅಮಿತ್ ಶಾ ಅವರನ್ನ ಭೇಟಿಯಾಗಲು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ನಳೀನ್ ಕುಮಾರ್ ಕಟೀಲ್ ಆಗಮಿಸಿದ್ದಾರೆ.

Key words: Union Home Minister -Amit Shah -met -discussed -former CM –B.S yeddyurappa