ಸೈಬರ್ ಅಪರಾಧಗಳ ತನಿಖೆ ಕೈಪಿಡಿ ಬಿಡುಗಡೆ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು, ಮಾರ್ಚ್ 04, 2023 (www.justkannada.in): ಸಿಐಡಿ ಕರ್ನಾಟಕ ಹೊರ ತಂದಿರುವ ಸೈಬರ್ ಅಪರಾಧಗಳ ತನಿಖೆ ಕುರಿತ ಕೈಪಿಡಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದರು.

ಬೆಂಗಳೂರು ನಗರದ ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೈಬರ್ ಅಪರಾಧಗಳ ತನಿಖಾ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿ-ಐಜಿಪಿ ಪ್ರವೀಣ್ ಸೂದ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

ಕೈಪಿಡಿಯನ್ನು ಸೆಂಟರ್ ಫಾರ್ ಸೈಬರ್ ಕ್ರೈಮ್ ಟ್ರೈನಿಂಗ್ ಮತ್ತು ರಿಸರ್ಚ್ (CCITR) ಮೂಲಕ ಅಭಿವೃದ್ಧಿಪಡಿಸಲಾಗಿದೆ. ಸಿಐಡಿ ಕರ್ನಾಟಕ ಡಾಟಾ ಸೆಕ್ಯುರಿಟಿ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಇನ್ಫೋಸಿಸ್ ಫೌಂಡೇಶನ್ ಸಹಯೋಗದೊಂದಿಗೆ ಕೈಪಿಡಿಯ ಇತ್ತೀಚಿನ ಆವೃತ್ತಿಯು ಸೈಬರ್ ಅಪರಾಧದ ಕುರಿತು ಅಮೂಲ್ಯವಾದ ಮಾರ್ಗದರ್ಶನವನ್ನು ಒದಗಿಸುವ ಗುರಿಯನ್ನು ಹೊಂದಿದೆ.