Saturday, September 26, 2026

BDA Apartments

Home Front Page ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ:  ಮಂಡ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ:  ಮಂಡ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್.

ಮಂಡ್ಯ,ಡಿಸೆಂಬರ್,29,2022(www.justkannada.in):  ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.

ಇಂದು ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.  ನಂತರ ಡಿ.30ರಂದು(ನಾಳೆ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಡ್ಯದಲ್ಲಿ ಡೈರಿ ಉದ್ಘಾಟನೆ ಮಾಡಿ  1.45ರಲ್ಲಿ ಮಂಡ್ಯ ವಿವಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಬಿಜೆಪಿ ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ನಂತರ ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ amith sha amith 1

ಮಂಡ್ಯದಲ್ಲಿ ನಾಳೆ ಬಿಜೆಪಿ ಬೃಹತ್ ಸಮಾವೇಶ ಹಿನ್ನೆಲೆ  ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಬಿಗಿಪೊಲೀಸ್ ಭದ್ರತೆ ನಿಯೋಜಿಸಲಾಗುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಗೆ ಭದ್ರತೆಯ ಹೊಣೆ ನೀಡಲಾಗಿದೆ. 1600ಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗಾಗಿ ನಿಯೋಜನೆ ಮಾಡಲಾಗಿದ್ದು, ಪಾಸ್ ಹೊಂದಿದವರಿಗೆ ಮಾತ್ರ ಸಮಾವೇಶಕ್ಕೆ ಪ್ರವೇಶ ನೀಡಲಾಗುತ್ತಿದೆ.

Key words: Union Home Minister- Amit Shah- state- visit- Mandya-police security