Saturday, September 26, 2026

BDA Apartments

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ...
Home Front Page ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಬಿಜೆಪಿ...

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಬಿಜೆಪಿ ನಾಯಕರಿಂದ ಸ್ವಾಗತ.

ಬೆಂಗಳೂರು,ಮಾರ್ಚ್,24,2023(www.justkannada.in): ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪದೇ ಪದೇ ಆಗಮಿಸಿ ವಿವಿಧ ಕಾರ್ಯಕ್ರಮ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದರು.

ಕುಮಾರಕೃಪಾ ರಸ್ತೆಯಲ್ಲಿರುವ ಮಾಜಿ ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಸಚಿವ ಗೋವಿಂದ ಕಾರಜೋಳ ಸಾಥ್ ನೀಡಿದರು.

ಬಿಎಸ್ ವೈ ನಿವಾಸದಲ್ಲಿ ಅಮಿತ್ ಶಾ ಅವರ ಜೊತೆ ಬಿಜೆಪಿ ನಾಯಕರು ಉಪಹಾರ ಕೂಟದಲ್ಲಿ ಪಾಲ್ಗೊಂಡಿದ್ದಾರೆ.

Key words: Union Home Minister -Amit Shah- visits- former CM- BS Yeddyurappa’s -residence