ನವದೆಹಲಿ,ಮೇ,15,2026 (www.justkannada.in): ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ನಾವೇ ಹೊರುತ್ತೇವೆ. ತಪ್ಪಿತಸ್ಥರ ವಿರುದ್ದ ಕ್ರಮಗೊಳ್ಳುತ್ತೇವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದರು.
ಈ ಕುರಿತು ಇಂದು ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತನಿಖೆ ಸಿಬಿಐಗೆ ವಹಿಸಿದ್ದೇವೆ. ತಪ್ಪಿತಸ್ಥರು ಯಾರೇ ಆಗಲಿ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮತ್ತೆ ಇಂತಹ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜೂನ್ 21 ರಂದು ನೀಟ್ ಯುಜಿ ಮರುಪರೀಕ್ಷೆ ನಡೆಯಲಿದೆ. ಜೂನ್ 14 ರಂದು ಹಾಲ್ ಟಿಕೆಟ್ ವಿತರಣೆ ಮಾಡಲಾಗುತ್ತದೆ. ನೀಟ್ ಯುಜಿ ಮರುಪರೀಕ್ಷೆಗೆ ಯಾವುದೇ ಶುಲ್ಕ ಕಟ್ಟುವಂತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟಪಡಿಸಿದರು.
Key words: Union Education Minister, Dharmendra Pradhan, NEET UG, Exam







