ಬೆಂಗಳೂರು,ಜನವರಿ,5,2021(www.justkannada.in): ದೇಹದಲ್ಲಿ ಶುಗರ್ ಲೆವೆಲ್ ಕಡಿಮೆಯಾಗಿ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರ ಸಚಿವರಾಗಿರುವ ಡಿ .ವಿ. ಸದಾನಂದಗೌಡ ಅವರು ಶಿವಮೊಗ್ಗದಲ್ಲಿ ನಡೆದ ಕಾರ್ಯಕರಣಿ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಬರುತ್ತಿದ್ದ ವೇಳಿ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರನ್ನ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಲೋ ಶುಗರ್ ಆಗಿರುವ ಕಾರಣದಿಂದ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಎರಡು ದಿನದ ಚಿಕಿತ್ಸೆಯ ಬಳಿಕ ಮಂಗಳವಾರ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
Key words: Union Minister -DV Sadananda Gowda -discharged – hospital