ದೇಶದಲ್ಲಿ 20% ಬಯೋ ಇಂಧನ ಬಳಕೆ ಹೆಚ್ಚಳ ಮಾಡುವ ಗುರಿ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ಬೆಂಗಳೂರು,ಫೆಬ್ರವರಿ,6,2023(www.justkannada.in): ದೇಶದಲ್ಲಿ 20% ಬಯೋ ಇಂಧನ ಬಳಕೆ ಹೆಚ್ಚಳ ಮಾಡಲು ಗುರಿ ಇಟ್ಟಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

ಬೆಂಗಳೂರು ಉತ್ತರ ತಾಲೂಕಿನ ಮಾದಾವರದಲ್ಲಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಇಂಧನ ಸಚಿವ ಹರ್​ದೀಪ್ ಸಿಂಗ್ ಪುರಿ  ಪರಿಸರ ಸ್ನೇಹಿ ಇಂಧನ ಬಳಕೆಗೆ ಹೊಸ ವೇಗ ನೀಡುವ ಪ್ರಯತ್ನ ಇದು. ಶೀಘ್ರದಲ್ಲೇ ಪರಿಸರ ಸ್ನೇಹಿ ವಾಹನ  ಸಿದ‍್ಧ. ಇಂಧನ ಭದ್ರತೆ ಭಾರತದ ಪ್ರಮುಖ ಆದ್ಯತೆಯಾಗಿದೆ. ಮೋದಿ ನೀಡಿದ್ದ ಗುರಿಯನ್ನ ಈಗಲೇ ಸಾಧಿಸಿದ್ದೇವೆ  . ಈ ಬಾರಿ ಬಜೆಟ್ ನಲ್ಲಿ 7 ಆದ್ಯತೆಗಳಲ್ಲಿ ಇದು ಒಂದಾಗಿದೆ ಎಂದರು.

ಭಾರತದಲ್ಲಿ ಎಲ್ಲರಿಗೂ ಕೈಗೆಟಕುವ ದರದಲ್ಲಿ ಇಂಧನ ಒದಗುವಂತೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 2030ರ ಒಳಗೆ ಭಾರತದಲ್ಲಿ ವಾಯುಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಸತತ ಪರಿಶ್ರಮ ಹಾಕುತ್ತಿದೆ. ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸರ ಸ್ನೇಹಿ ಇಂಧನಕ್ಕೆ ನಾವು ಆದ್ಯತೆ ನೀಡಿದ್ದೇವೆ. ಆದರೆ ಅಭಿವೃದ್ಧಿಯ ವಿಚಾರದಲ್ಲಿ ರಾಜಿಯಾಗುತ್ತಿಲ್ಲ. ಸೂರ್ಯನ ಬೆಳಕಿನಿಂದ ಅಡುಗೆ ಮಾಡುವ ಸೋಲಾರ್ ಕುಕ್​ಟಾಪ್​ಗಳ ಬಳಕೆಗೆ ಇಂದು ಚಾಲನೆ ಸಿಗಲಿದೆ. ಈ ತಂತ್ರಜ್ಞಾನವನ್ನು ಭಾರತ ಹಂಚಿಕೊಳ್ಳಲಿದೆ. ಇದನ್ನು ಯಥಾವತ್ತಾಗಿ ಏಷ್ಯಾದ ಇತರ ದೇಶಗಳೂ ಬಳಸಬಹುದಾಗಿದೆ ಎಂದು ಹೇಳಿದರು.

Key words: Union Minister- Hardeep Singh Puri – increase -bio fuel- consumption – 20%