Friday, July 31, 2026

BDA Apartments

Home Front Page ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ- ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ

ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ- ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ

ಬೆಂಗಳೂರು,ನವೆಂಬರ್,29,2025 (www.justkannada.in): ಡ್ರಾಮಾ ನಡೆಯುತ್ತಿದೆ. ಡ್ರಾಮಾದ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದರು.

ಅಧಿಕಾರ ಹಂಚಿಕೆ ಗೊಂದಲ, ಸಿಎಂ ಮತ್ತು ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ನಾಡಿನ ಜನತೆ ಕಾಂಗ್ರೆಸ್ ಗೆ 140 ಸ್ಥಾನ ಕೊಟ್ಟಿದ್ದಾರೆ ಅದರೆ ಕಳೆದ ಎರಡುವರೆ ವರ್ಷದಿಂದ ಸರ್ಕಾರ ಮಾಡಿದ್ದು ಏನು? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನಲ್ಲಿ ಬರೀ ಮುಖ್ಯಮಂತ್ರಿ ಕುರ್ಚಿ ಬಗ್ಗೆ ಚರ್ಚೆ ನಡೆಯುತ್ತಿದೆ.  ಕಾಂಗ್ರೆಸ್ ನವರಿಗೆ ರಾಜ್ಯದ ಬಗ್ಗೆ ಕಿಂಚಿತ್ತು ಕಾಳಜಿ ಇದೆಯಾ? ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಅಂತಾ ಇದೆಯಾ? ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು  ಹೆಚ್ ಡಿಕೆ ವಾಗ್ದಾಳಿ ನಡೆಸಿದರು.

Key words: no need, discuss, this government, Union Minister, HDK