Sunday, November 15, 2026

Dasara Wishes

Happy Dasara
Home Front Page ರಾಜ್ಯ ‘ಕೈ’ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ –ಕೇಂದ್ರ ಸಚಿವ ಹೆಚ್ .ಡಿಕೆ ನೇರ ಆರೋಪ

ರಾಜ್ಯ ‘ಕೈ’ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ –ಕೇಂದ್ರ ಸಚಿವ ಹೆಚ್ .ಡಿಕೆ ನೇರ ಆರೋಪ

ಸಿಜೆಪಿಗೆ ಫಂಡ್‌ ಮಾಡುತ್ತಿರುವುದು ಕಾಂಗ್ರೆಸ್:‌ ರಜ್ಯದ ಹಣ ಲೂಟಿ ಮಾಡಿ ದೆಹಲಿಗೆ ಸಾಗಾಟ-ಕೇಂದ್ರ ಸಚಿವ ಹೆಚ್‌ ಡಿಕೆ

ಬೆಂಗಳೂರು,ಜನವರಿ,10,2025 (www.justkannada.in):  ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ . ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, 60% ಕಮೀಷನ್ ಆರೋಪವನ್ನು ಪುನರುಚ್ಚರಿಸಿದರು.

60% ಕಮೀಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಗುತ್ತಿಗೆದಾರರೇ ಪರ್ಸಂಟೇಜ್ ಆರೋಪ ಮಾಡುತ್ತಿದ್ದಾರೆ. ಅವರನ್ನು ಪರ್ಸಂಟೇಜ್ ಕೇಳದಿದ್ದರೆ ಅವರು ಯಾಕೆ ಆರೋಪ ಮಾಡುತ್ತಿದ್ದರು. ಸರ್ಕಾರ ಅವರನ್ನೇ ಕೇಳಿ ದಾಖಲೆ ಪಡೆದುಕೊಳ್ಳಬೇಕು ಎಂದು ಹೆಚ್ ಡಿಕೆ ಟಾಂಗ್ ಕೊಟ್ಟರು.

ಸಿದ್ದರಾಮಯ್ಯ ಅವರು ಮಹಾನ್ ನಾಯಕರು. ಪೇ ಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಅವರು ಇಲ್ಲಿಯವರೆಗೆ ಯಾವ ದಾಖಲೆ ಇಟ್ಟಿದ್ದಾರೆ ಜನರ ಮುಂದೆ. ಕೆಂಪಣ್ಣ ಹೇಳಿದರು ಕೆಂಪಣ್ಣ ಹೇಳಿದರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೆಂಪಣ್ಣ ಅವರಿಂದ ಸಿದ್ದರಾಮಯ್ಯ ಅವರು ದಾಖಲೆ ಪಡೆದುಕೊಳ್ಳಬೇಕಿತ್ತಲ್ಲವೇ? ಈಗ ಕಂಟ್ರಾಕ್ಟರ್ ಗಳೇ 60% ವಸೂಲಿ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಅದಕ್ಕಿಂತ ಸಾಕ್ಷಿ ಬೇಕಾ ಇವರಿಗೆ? ಈ ಆಟ ಸರಕಾರ ಬಿಡಬೇಕು ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

60% ಕಮೀಷನ್ ಬಗ್ಗೆ ಉತ್ತರ ಹೇಳಲಿ:  ಕೃಷ್ಣಭೈರೇಗೌಡ ವಿರುದ್ದ ವಾಗ್ದಾಳಿ

ಮಗ ಸೋತಿರುವುದಕ್ಕೆ ಹತಾಶರಾಗಿ ಕುಮಾರಸ್ವಾಮಿ 60% ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ನಾನು ಮಗ ಸೋತಿರುವುದಕ್ಕೆ ಹತಾಶನಾಗಿದ್ದೇನೋ ಇಲ್ಲವೋ. ಎಂಬುದ್ಧು ಇರಲಿ. ಅದನ್ನು ಬಿಟ್ಟು ಮೊದಲು 60% ಕಮೀಷನ್ ಬಗ್ಗೆ ಉತ್ತರ ಹೇಳಲಿ ಎಂದು ಕೇಂದ್ರ ಸಚಿವ ಹೆಚ್ ಡಿಕೆ ಸವಾಲು ಹಾಕಿದರು.

ಕಂದಾಯ ಇಲಾಖೆ ಸತ್ಯ ಮಾರ್ಗದಲ್ಲಿ ನಡೆಯುತ್ತಿದೆಯಾ? ಬೆಂಗಳೂರು AC ಪೋಸ್ಟ್ ಗೆ ಎಷ್ಟು ದುಡ್ಡು ತೆಗೆದುಕೊಳ್ಳುತ್ತಿದ್ದೀರಿ? ಎಷ್ಟು ರೇಟ್ ಫಿಕ್ಸ್ ಮಾಡಿಕೊಂಡಿದ್ದೀರಾ? ಆ ಹಣ ಯಾರು ಯಾರಿಗೆ ಹೋಗುತ್ತದೆ? ಏನೇನು ದಂಧೆ ನಡೆಸುತ್ತಿದ್ದೀರಿ ಎನ್ನುವುದು ನಮಗೆ ಗೊತ್ತಿಲ್ಲವಾ? ಎಂದು ಕಂದಾಯ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಸರಕಾರ ಸಹಿ ಮಾರಾಟಕ್ಕೆ ಇಟ್ಟಿದೆ:

ನಾನು ಕೂಡ ಎರಡು ಸಿಎಂ ಆಗಿ ಅಧಿಕಾರ ನಡೆಸಿದ್ದೇನೆ. ನಾನು ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ವಿಧಾನಸಭೆಯಲ್ಲಿಯೇ ಈ ಮಾತು  ಹೇಳಿದ್ದೇನೆ. ಚುನಾವಣೆ ನಡೆಸಬೇಕಾದರೆ ಇನ್ನೊಬ್ಬರ ಹತ್ತಿರ ಕೈ ಚಾಚಲೇಬೇಕು. ಆದರೆ ನಾನು ಅಧಿಕಾರ ನಡೆಸುವಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಈ ಸರಕಾರ ಪ್ರತಿಯೊಂದಕ್ಕೂ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಪ್ರತಿಯೊಂದಕ್ಕೂ ಲೂಟಿ ಹೊಡೆದುಕೊಂಡು ಕೂತಿದ್ದಾರೆ. ಈ ಸರಕಾರದಲ್ಲಿ ರೇಟ್ ಕಾರ್ಡ್ ಮೊದಲೇ ಫಿಕ್ಸ್ ಆಗಿ ಹೋಗಿದೆ. ನಾನು ಪ್ರಾರಂಭದಲ್ಲೇ ಈ ಸರ್ಕಾರದ ರೇಟ್ ಕಾರ್ಡ್ ಬಗ್ಗೆ ಹೇಳಿದ್ದೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ನಾನು ಸತ್ಯ ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ಇವತ್ತಿನ ರಾಜಕಾರಣಕ್ಕೆ ದುಡ್ಡು ಬೇಕು. ಪ್ರೀತಿ ವಿಶ್ವಾಸದಿಂದ ನಾವು ಕೆಲಸ ಮಾಡಿದಾಗ ಚುನಾವಣೆ ಸಮಯದಲ್ಲಿ ಯಾರೋ ನಾಲ್ವರು ಸಹಾಯ ಮಾಡುತ್ತಾರೆ. ಆದರೆ ಅಧಿಕಾರ ಇಟ್ಟುಕೊಂಡು ಪ್ರತಿದಿನ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಈ ಸರಕಾರ ಪ್ರತಿಯೊಂದಕ್ಕೂ ತನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಪ್ರತೀ ಕ್ಷಣವೂ ಈ ಸರಕಾರದಲ್ಲಿ ಮಾರಾಟವೇ ನಡೆಯುತ್ತಿದೆ ಎಂದು ಅವರು ಕಿಡಿಕಾರಿದರು.

Key words: Rate,  fixing, state government, ​​Union Minister, HDK