ಬೆಂಗಳೂರು,ಜನವರಿ,10,2026 (www.justkannada.in): ಮನರೇಗಾ ಯೋಜನೆಯನ್ನು ವಿಬಿ-ಜಿ ರಾಮ್ ಜಿ ಎಂದು ಹೆಸರು ಬದಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರ ವಿರುದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಕಾಂಗ್ರೆಸ್ ನವರು ಪ್ರಚಾರಕ್ಕಾಗಿ ವಿಬಿ-ಜಿ ರಾಮ್ ಜಿ ಯೋಜನೆ ವಿರೋಧ ಮಾಡುತ್ತಿದ್ದಾರೆ. ಓಪನ್ ಡಿಬೆಟ್ ಮಾಡೋಣ. ನಾವೇನೂ ಖುದ್ದು ಹೋಗಲ್ಲ ಪಾಸಿಟಿವ್ ನೆಗೆಟಿವ್ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ ಕೊಡುತ್ತೇನೆ. ಚರ್ಚೆಯಾಗಲಿ ಎಂದು ಸವಾಲು ಹಾಕಿದರು.
ಸಿಎಂ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಆಗುವ ಮೂಲಕ ಮಾಜಿ ಸಿಎಂ ಡಿ.ದೇವರಾಜ ಅರಸು ದಾಖಲೆ ಮುರಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವವರೆಗೆ ಇರುತ್ತೇನೆ ಎಂದಿದ್ದಾರೆ. ಮಾಜಿ ಸಿಎಂ ದೇವರಾಜ ಅರಸು ದಾಖಲೆ ಅಂತಾರಲ್ಲ, ಈ ಹಿಂದೆ ಇಂದಿರಾಗಾಂಧಿ ವಿರುದ್ದ ದೇವರಾಜ ಅರಸು ಸೆಡ್ಡು ಹೊಡೆದು ನಿಂತಿದ್ದರು. ಈಗ ಯಾವಾಗ ಹೋಗು ಅಂತಾರೆ ಅಂತಾ ಸಿದ್ದರಾಮಯ್ಯ ಕಾಯುತ್ತಿದ್ದಾರೆ ರಾಹುಲ್ ಗಾಂಧಿ ಯಾವಾಗ ಹೋಗು ಎನ್ನುತ್ತಾರೆ ಎಂದು ಸಿದ್ದರಾಮಯ್ಯ ಕಾಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
Key words: Opposition, VB-G Ramji scheme, Congress, Union Minister, HDK







