ಬೆಂಗಳೂರು,ಜನವರಿ,24,2026 (www.justkannada.in): ಜೆಡಿಎಸ್ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಇಂದು ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಭ್ರಷ್ಟ ಸರ್ಕಾರ ತೆಗೆಯಲು ಈ ಸಮಾವೇಶ ಮಾಡುತ್ತಿದ್ದೇವೆ. ಜೆಡಿಎಸ್ ಪಕ್ಷ ಸ್ಥಾಪನೆ ಮಾಡಿ 25 ವರ್ಷ ಆಗಿದೆ. ಹೆಚ್ ಡಿ ದೇವೇಗೌಡರ ಜನ್ಮಭೂಮಿಯಲ್ಲೇ ಬೆಳ್ಳಿಹಬ್ಬ ಮಾಡುತ್ತಿದ್ದೇವೆ ಎಂದರು.
ಜೆಡಿಎಸ್ ಪಕ್ಷವನ್ನ ಸದೃಢ ಮಾಡಲು ಸಮಾವೇಶ ಮಾಡುತ್ತಿದ್ದೇವೆ. ಜೆಡಿಎಸ್ ಪಕ್ಷ ನಾಶವಾಗಲಿ ಅಂತಾ ವಿಪಕ್ಷಗಳು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದು ರೈತರಿಂದ ಬೆಳೆದ ಪಕ್ಷ. ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
Key words: JDS party, farmers, Union Minister, HDK







