Wednesday, September 30, 2026

BDA Apartments

ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ BDA JK_Adv BDA Adv
Home Front Page ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

 ಬೆಂಗಳೂರು,ಸೆಪ್ಟಂಬರ್,27,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇತ್ತ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ ಐಆರ್ ದಾಖಲಾಗಿದೆ.  ಅತ್ತ ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

ಹೌದು ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿಯಿಂದ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ ಏರ್ ಪೋರ್ಟ್ ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ತೆರಳಿದ್ದಾರೆ.

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ  ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್​ ಜಾರಿ ಮಾಡಿದ್ದರು. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್​ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ನೀಡಲಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು.

ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ VTU TOP BANNER 04

Key words: Union Minister, HDK, attended, Lokayukta, hearing