Thursday, September 10, 2026

BDA Apartments

Home Front Page ಹೆಚ್ ಡಿಡಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದಕ್ಕೆ ಟೀಕೆ: ಕಾಂಗ್ರೆಸ್ ಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ...

ಹೆಚ್ ಡಿಡಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದಕ್ಕೆ ಟೀಕೆ: ಕಾಂಗ್ರೆಸ್ ಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK

ಬೆಂಗಳೂರು,ಜೂನ್,9,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕಟ್ ಕೈತಪ್ಪಿದಕ್ಕೆ  ಬಿಜೆಪಿ ವಿರುದ್ದ ಟೀಕಾಪ್ರಹಾರ ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆ ತಗ್ಗಹಳ್ಳಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿಕೆ, ರಾಜ್ಯಸಭಾ ಟಿಕೆಟ್ ಗಾಗಿ ಹೆಚ್ ಡಿ ದೇವೇಗೌಡರು ಅರ್ಜಿಯೇ ಹಾಕಿಲ್ಲ. ಹೆಚ್ ಡಿ ದೇವೇಗೌಡರ ಬಗ್ಗೆ ಕಾಂಗ್ರೆಸ್ಸಿಗರಿಗೆ ಈಗ ಅನುಕಂಪ ಬಂದಿದೆ.  ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಭಯ ಶುರುವಾಗಿದೆ  ಮೈತ್ರಿಯಲ್ಲಿ ಬಿರುಕು ತರಲು ಕಾಂಗ್ರೆಸ್ ಯತ್ನಿಸುತ್ತಿದೆ.  ದೇವೇಗೌಡೌರು ಅಧಿಕಾರಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಹುದ್ದೆಯನ್ನೇ ಬಿಟ್ಟಿದ್ದರು ಎಂದು ಕಾಂಗ್ರೆಸ್ ಗೆ ಕುಟುಕಿದರು.

ಕಳೆದ ಬಾರಿ ಹೆಚ್ ಡಿ ದೇವೇಗೌಡರ ಅವಿರೋಧ ಆಯ್ಕೆಗೆ ಕಾಂಗ್ರೆಸ್ ಬೆಂಬಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್ ಡಿ ಕುಮಾರಸ್ವಾಮಿ,  ದೇವೇಗೌಡರ ವಿರುದ್ದ  ಇನ್ನೊಬ್ಬ  ಅಭ್ಯರ್ಥಿ ನಿಲ್ಲುವ  ಅವಕಾಶ ಇರಲಿಲ್ಲ ಎಂದರು.

Key words: Union Minister, HDK, Congress, Rajya Sabha, ticket, HD Devegowda