Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ನಾನೇ ಅಭ್ಯರ್ಥಿ ಎಂದ ಸಿಪಿ ಯೋಗೇಶ್ವರ್ ಗೆ ಕೇಂದ್ರ ಸಚಿವ ಹೆಚ್.ಡಿಕೆ ಟಾಂಗ್

ನಾನೇ ಅಭ್ಯರ್ಥಿ ಎಂದ ಸಿಪಿ ಯೋಗೇಶ್ವರ್ ಗೆ ಕೇಂದ್ರ ಸಚಿವ ಹೆಚ್.ಡಿಕೆ ಟಾಂಗ್

ರಾಮನಗರ, ಅಕ್ಟೋಬರ್,17,2024 (www.justkannada.in): ಚನ್ನಪಟ್ಟಣ ಎನ್ ಡಿಎ ಅಭ್ಯರ್ಥಿ ನಾನೇ ಎಂದು ಹೇಳಿದ ಸಿ.ಪಿ ಯೋಗೇಶ್ವರ್ ಗೆ ಟಾಂಗ್ ಕೊಟ್ಟಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಹೀಗೆ ಯಾರು ಬೇಕಾದರೂ ಹೇಳಿಕೊಳ್ಳಬಹುದು. ಅಂತಿಮವಾಗಿ ಪಕ್ಷದ ಹಿರಿಯ ನಾಯಕರು ಕೂತು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಹುಟ್ಟುಹಾಕಿದ್ದು, ಈ ಮಧ್ಯೆ ಬಿಡದಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಾರ್ಯಕರ್ತರ ಸಭೆ ನಡೆಸಿದರು.

ಬಳಿಕ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ಮಾಡುತ್ತೇನೆ. ಆರ್. ಅಶೋಕ್, ಬಿವೈ ವಿಜಯೇಂದ್ರ ಜತೆ ಮಾತನಾಡಿದ್ದೇನೆ. ಕ್ಷೇತ್ರದ ಬಗ್ಗೆ ಚರ್ಚಿಸೋಣ ಎಂದು ಹೇಳಿದ್ದೇನೆ.  ನಾಡಿದ್ದು ಎರಡೂ ಪಕ್ಷದ ನಾಯಕರು ಕುಳಿತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

Key words: Union Minister, HDK, CP Yogeshwar, channaptna