Monday, September 14, 2026

BDA Apartments

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ HDK BDA JK_Adv BDA Adv
Home Front Page  ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ HDK

 ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ HDK

ಬೆಂಗಳೂರು, ಜೂನ್​​, 15,2026 (www.justkannada.in):  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದು  ಇರುಮುಡಿ ಹೊತ್ತು ಶಬರಿಮಲೆಗೆ ಯಾತ್ರೆಗೆ ಹೊರಟಿದ್ದಾರೆ.

ಇಂದು ಬೆಳಿಗ್ಗೆ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಕೇಂದ್ರ ಸಚಿವ ಹೆಚ್ ಡಿಕೆ, ಶಬರಿಮಲೆಗೆ ಯಾತ್ರೆಗೆ ತೆರಳುತ್ತಿದ್ದು ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ತಲುಪಲಿದ್ದಾರೆ. ಇಲ್ಲಿ ಸಚಿವರು ಮತ್ತು ತಂಡ ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ ಸಾಗಲಿದೆ ಎನ್ನಲಾಗಿದೆ.ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ HDK hdk hdk 1

ಈ ಮಧ್ಯೆ ಸಂಜೆ ಹೆಚ್ ಡಿ ಕುಮಾರಸ್ವಾಮಿ ಅವರು  ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದು , ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರ, ಶಾಸಕಶರಣಗೌಡ ಕಂದಕೂರ ಸೇರಿ ಹಲವರು  ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.justkannada jk02_new jk02 new

Key words: Union Minister, HDK , Sabarimala Yatra