Friday, September 18, 2026

BDA Apartments

ನಾಳೆ ಮೈಸೂರಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ BDA JK_Adv BDA Adv
Home Front Page ನಾಳೆ ಮೈಸೂರಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನಾಳೆ ಮೈಸೂರಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಮೈಸೂರು,ನವೆಂಬರ್,7,2024 (www.justkannada.in): ನಾಳೆ ಮೈಸೂರಿನಲ್ಲಿ ನಡೆಯಲಿರುವ ಸಂಗೀತ ಸುಗಂಧ ಉತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಮೈಸೂರಿಗೆ ಆಗಮಿಸಲಿದ್ದಾರೆ.

ನಾಳೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಮೈಸೂರು ಸಂಗೀತ ಸುಗಂಧ ಉತ್ಸವದ ಉದ್ಘಾಟನಾ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಳ್ಳಲಿದ್ದಾರೆ.

ಹಾಗೆಯೇ ಗೌರವ ಅತಿಥಿಗಳಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಪ್ರಚಾಸೋದ್ಯಮ ರಾಜ್ಯ ಸಚಿವ ಸುರೇಶ್ ಗೋಪಿ, ವಿಶೇಷ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿರಲಿದ್ದಾರೆ.

Key words: Union Minister, Nirmala Sitharaman, Mysore , tomorrow