ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ

ಶಿವಮೊಗ್ಗ, ಜುಲೈ,14,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ನೂತನ ಸೇತುವೆಗೆ ’ಚೌಡೇಶ್ವರಿ ದೇವಿ’’ ಎಂದು ಹೆಸರನ್ನ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಘೋಷಣೆ ಮಾಡಿದರು.

ಇಂದು  ನೂತನ ಸೇತುವೆಯನ್ನು ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಕೇಂದ್ರ ಸಚಿವ ನಿತಿನ್​ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದರು.

ಸೇತುವೆ ನಿರ್ಮಾಣದ ಕೆಲಸ ನನ್ನಿಂದ ಆಗಿಲ್ಲ. ಸಿಗಂದೂರು ಚೌಡೇಶ್ವರಿ ದೇವಿಯ ಆಶೀರ್ವಾದದಿಂದ ಆಗಿದೆ. ಹೀಗಾಗಿ ಆ ತಾಯಿಯ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಈ ಮೂಲಕ ಈ ಭಾಗದ ಜನರ ಭಾವನೆ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.vtu

Key words: Sigandur, Chowdeshwari Devi,  name, Bridge, Union Minister, Nitin Gadkari