ಹುಬ್ಬಳ್ಳಿ,ಡಿಸೆಂಬರ್,13,2025 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ದುಡ್ಡಿಲ್ಲ ಅಂತಾ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನ ಭರ್ತಿ ಮಾಡುತ್ತಿಲ್ಲ. ಈ ಮೂಲಕ ನಿರುದ್ಯೋಗಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2 ಲಕ್ಷ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡದೇ ಕಳೆದ ಎರಡುವರೆ ವರ್ಷದಿಂದಲೂ ಬರೀ ಕಾರಣವನ್ನೇ ಹೇಳುತ್ತಿದ್ದಾರೆ. ದುಡ್ಡಿಲ್ಲ ಅಂತಾ ರಾಜ್ಯ ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಐದಾರು ವರ್ಷಗಳಿಂದ ಕೇಂದ್ರ ಸರ್ಕಾರ ಹುದ್ದೆಗಳನ್ನ ಭರ್ತಿ ಮಾಡುತ್ತಿದೆ ಎಂದರು.
ಬೆಲಗಾವಿಯಲ್ಲೂ ಕಾಂಗ್ರೆಸ್ ನಾಯಕರು ಡಿನ್ನರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಾರೆ. ರಾಜಕೀಯ ಅಸ್ಥಿರತೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
Key words: government posts, due, lack of money, Congress, Union Minister, Prahlad Joshi







