Thursday, September 10, 2026

BDA Apartments

Home Front Page ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು,ಜುಲೈ,24,2026 (www.justkannada.in):    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಕರಣ ಸಂಬಂಧ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮುಂದೆ ಇಂತಹ ಪ್ರಕರಣ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ.  ಪ್ರತಿಭಟನೆ ನಡೆಸುತ್ತಿರುವ ನಿಜವಾದ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಲಿದೆ. ಬೇಡಿಕೆ ಸಲಹೆಗಳನ್ನು ಸರ್ಕಾರ ಮುಕ್ತಮನಸ್ಸಿನಿಂದ ಸ್ವೀಕರಿಸಿಲಿದೆ ಎಂದರು.

ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುವ ವಿಪಕ್ಷ ಗಳು ತಮ್ಮ ಅವಧಿಯಲ್ಲಿ ಏನಾಗಿತ್ತು ಎಂಬುದನ್ನು ನೋಡಿಕೊಳ್ಳಲಿ. ಸೋನಮ್ ವಾಂಗ್ಚುಕ್ ಕೂಡ ಉಪವಾಸ ಅಂತ್ಯಗೊಳಿಸಿದ್ದಾರೆ. ನಡ್ಡಾ ಜೀತೆಂಧ್ರ ಸಿಂಗ್ ಅವರು ಚರ್ಚೆ ನಡೆಸಿದ ಬಳಿಕ ವಾಂಗ್ಚುಕ್ ಉಪವಾಸ ಅಂತ್ಯ ಮಾಡಿದ್ದಾರೆ. ವಾಂಗ್ಚುಕ್ ಆರೋಗ್ಯ ವಿಚಾರಿಸುವೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

Key words: Question paper, leak case, Strict action, Union Minister, Prahlad Joshi