Thursday, August 6, 2026

BDA Apartments

Home Front Page ಅಭಿವೃದ್ಧಿಗೆ ಹಣ ಇಲ್ಲ ಎಂದ ಡಿಸಿಎಂ ಡಿ.ಕೆ ಶಿವಕುಮಾರ್  ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಅಭಿವೃದ್ಧಿಗೆ ಹಣ ಇಲ್ಲ ಎಂದ ಡಿಸಿಎಂ ಡಿ.ಕೆ ಶಿವಕುಮಾರ್  ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ಕಿಡಿ.

ಬೆಂಗಳೂರು,ಜುಲೈ,27,2023(www.justkannada.in):  ಐದು ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುತ್ತಿರುವ ಹಿನ್ನೆಲೆ , ಆರ್ಥಿಕ ಅಡಚಣೆ ಉಂಟಾಗಿದ್ದು ಈ ವರ್ಷ ಅಭಿವೃದ್ದಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾಟಕದ ಅಭಿವೃದ್ಧಿ ಇಲ್ಲ.  ಅಧಿಕಾರದ ಹಸಿವಿನಿಂದ ಆಶ್ವಾಸನೆ ಕೊಟ್ಟು ಅವುಗಳನ್ನು ಪೂರೈಸಲೂ ಆಗದೆ ಅಭಿವೃದ್ಧಿಗೆ ಹಣ ಇಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ ಸರ್ಕಾರಕ್ಕೆ ದೂರದೃಷ್ಟಿಯೂ ಇಲ್ಲ ಜವಾಬ್ದಾರಿಯೂ ಇಲ್ಲ ಎಂದು ಕಿಡಿಕಾರಿದ್ದಾರೆ.

Key words: Union Minister- Prahlad Joshi –against- DCM -DK Shivakumar