Sunday, August 23, 2026

BDA Apartments

Home Front Page ಬಜೆಟ್ ಮಂಡನೆಗಿಂತ ಬಿಜೆಪಿಗೆ ಬೈಯ್ದಿದ್ದೇ ಹೆಚ್ಚು-ಸಿಎಂ ಸಿದ್ಧರಾಮಯ್ಯ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ.

ಬಜೆಟ್ ಮಂಡನೆಗಿಂತ ಬಿಜೆಪಿಗೆ ಬೈಯ್ದಿದ್ದೇ ಹೆಚ್ಚು-ಸಿಎಂ ಸಿದ್ಧರಾಮಯ್ಯ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ.

ಹುಬ್ಬಳ್ಳಿ,ಜುಲೈ,8,2023(www.justkannada.in): ನಿನ್ನೆ ಸಿಎಂ ಸಿದ್ಧರಾಮಯ್ಯ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಬಜೆಟ್ ಮಂಡನೆಗಿಂತ ಬಿಜೆಪಿಗೆ ಬೈಯ್ದಿದ್ದೇ ಹೆಚ್ಚು ಎಂದು ಟೀಕಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೇಶದಲ್ಲಿ ಕೊವಿಡ್ ವ್ಯಾಕ್ಸಿನ್ ತಯಾರಿಸಿ ಎಲ್ಲರಿಗೂ ನೀಡಿದ್ದೇವೆ. ವಿದೇಶಗಳಿಗೂ ಕೊಟ್ಟಿದ್ದನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡುತ್ತಾರೆ. ಸಿದ್ದರಾಮಯ್ಯ ಭಾರತ ದ್ವೇಷಿ ರಾಹುಲ್ ಗಾಂಧಿ ರೀತಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಜೆಟ್ ನಲ್ಲಿ ಆಸ್ತಿ ದರ ಏರಿಕೆ ಮಾಡಿದ್ದಾರೆ, ಅಬಕಾರಿ ಟಾರ್ಗೆಟ್ ಕೊಟ್ಟಿದ್ದಾರೆ. ಎಲ್ಲರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನುತ್ತಾರೆ.  ಎನ್​​ ಇಪಿಗೆ ಮೊದಲು ಕಾಂಗ್ರೆಸ್ ಒಪ್ಪಿಗೆ ನೀಡಿತ್ತು ಆದರೆ ಇವತ್ತು ಕೈ ಬಿಟ್ಟಿದ್ದಾರೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

Key words: Union Minister- Prahlad Joshi -CM Siddaramaiah- budget.