ಮೈಸೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಪ್ರತಿಭಟನೆ ಬಿಸಿ.

ಮೈಸೂರು,ಆಗಸ್ಟ್,17,2021(www.justkannada.in): ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮೈಸೂರಿನಲ್ಲಿ ಪ್ರತಿಭಟನೆಯ ಬಿಸಿ ತಟ್ಟಿದೆ.

ಹೌದು, ರೈತರ ಆದಾಯ ದ್ವಿಗುಣಗೊಳಿಸುವ ಹೆಸರಿನಲ್ಲಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನ ತಡೆದ ಪ್ರತಿಭಟನಾ ನಿರತ ರೈತರು ರೈತರ ಸಮಸ್ಯೆ ಹೇಳಿಕೊಂಡಿದ್ದಾರೆ.

ಜನಾಶೀರ್ವಾದ ಕಾರ್ಯಕ್ರಮದ ಬಳಿಕ ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಅವರನ್ನ ತಡೆದು ಸಮಸ್ಯೆಗಳನ್ನ ಹೇಳಿಕೊಳ್ಳಲು ರೈತರು ಮುಂದಾಗಿದ್ದಾರೆ. ಈ ಸಮಯದಲ್ಲಿ ಶೋಭಾ ಕರಂದ್ಲಾಜೆ ಅವರು ಅರ್ಧದಲ್ಲೇ ತೆರಳಿದ್ದು ಇದಕ್ಕೆ ಪ್ರತಿಭಟನಾನಿರತ ರೈತರು ಕಿಡಿಕಾರಿದ್ದಾರೆ ಎನ್ನಲಾಗಿದೆ.

Key words: Union Minister – Shobha Karandlaje- Mysore –protest-farmer