Saturday, August 1, 2026

BDA Apartments

Home Front Page ದಸರಾ ಗಜಪಡೆ ಮಾವುತರು-ಕಾವಾಡಿಗರಿಗೆ ಉಪಹಾರ ಬಡಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದಸರಾ ಗಜಪಡೆ ಮಾವುತರು-ಕಾವಾಡಿಗರಿಗೆ ಉಪಹಾರ ಬಡಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು, ಅಕ್ಟೋಬರ್ 23, 2023 (www.justkannada.in): ನಾಡಹಬ್ಬ ದಸರಾ ಮಹೋತ್ಸವದ ಕೇಂದ್ರ ಬಿಂದು ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಸಚಿವೆ ಶೋಭಾ ಕರಂದ್ಲಾಜೆ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಿದ್ದರು.

ಇಂದು ಮೈಸೂರು ಅರಮನೆ ಆವರಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾವುತರು ಹಾಗೂ ಕಾವಾಡಿಗರಿಗೆ ಉಪಹಾರ ಬಡಿಸಿದರು.

ಮಾವುತರು ಮತ್ತು ಕಾವಾಡಿಗರು ಅವರ ಕುಟುಂಬದವರಿಗೆ ಶೋಭಾ ಕರಂದ್ಲಾಜೆ ಸ್ವತಃ ಉಪಹಾರ ಬಡಿಸಿದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಸ್ಥಳೀಯ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.