ಜಾತಿಗಣತಿ ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಚಿಂತನೆ-ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು,ಮೇ,1,2025 (www.justkannada.in): ದೇಶದಲ್ಲಿ ಜನಗಣತಿ ಜೊತೆಗೆ ಜಾತಿಗಣತಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಜಾತಿಗಣತಿ ಪ್ರಧಾನಿ ಮೋದಿಯವರ ದೂರದೃಷ್ಟಿಯ ಚಿಂತನೆ. ಜ್ವಲಂತ ಸಮಸ್ಯೆಗಳಿಗೆ ಮೋದಿಯವರು ಪರಿಹಾರ ನೀಡುತ್ತಾರೆ. ರಾಜ್ಯ ಸರ್ಕಾರದ ಜಾತಿಗಣತಿಗೆ ಬೆಲೆಯೇ ಇಲ್ಲ. ಹೀಗಾಗಿ ಕೇಂದ್ರಕ್ಕೆ ಜಾತಿಗಣತಿ ಮಾಡಲು ಅಧಿಕಾರ ಇದೆ. ಜಾತಿಗಣತಿ ಮಾಡಲಿದೆ ಎಂದರು.

ರಾಜ್ಯ ಸರ್ಕಾರ ಗಾಳಿಯಲ್ಲಿ ಗುಂಡು ಹೊಡೆಯೋದು ಬಿಡಲಿ. ರಾಜ್ಯದ ಅಭಿವೃದ್ದಿಗೆ ಶ್ರಮಿಸಲಿ ಎಂದು ವಿ.ಸೋಮಣ್ಣ ಟಾಂಗ್ ಕೊಟ್ಟರು.

Key words: PM Modi, caste census, Union Minister, V. Somanna