ಅತ್ಯಾಚಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಉನ್ನಾವೋ ಸಂತ್ರಸ್ತೆ ಕುಟುಂಬಸ್ಥರ ಆಗ್ರಹ….

ನವದೆಹಲಿ,ಡಿ,7,2019(www.justkannada.in): ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಉನ್ನಾವೋ ಸಂತ್ರಸ್ತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಶೇಕಡಾ 90 ಕ್ಕಿಂತ ಹೆಚ್ಚು ಸುಟ್ಟ ಗಾಯಗಳಿಂದ ಜೀವನ್ಮರಣದಲ್ಲಿ ಹೋರಾಡುತ್ತಿದ್ದ ಉನ್ನಾವೋ(UNNAO) ಅತ್ಯಾಚಾರ ಸಂತ್ರಸ್ತೆ ಸಾವನ್ನಪ್ಪಿದ್ದಾರೆ. ಸಂತ್ರಸ್ತೆ ರಾಯಬರೇಲಿಯಲ್ಲಿ ತನ್ನ ವಕೀಲರನ್ನು ಭೇಟಿ ಮಾಡಲು ಹೋಗುತ್ತಿದ್ದ ವೇಳೆ ಅತ್ಯಾಚಾರ ಆರೋಪಿ ಸೇರಿದಂತೆ ಐದು ಮಂದಿ  ದುಷ್ಕರ್ಮಿಗಳು ಆಕೆಯನ್ನು ಅಡ್ಡಗಟ್ಟಿ ಆಕೆಯ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದರು.

ತೀವ್ರ ಗಾಯಗೊಂಡಿದ್ದ ಸಂತ್ರಸ್ತೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸಂತ್ರಸ್ತೆ ಸಾವನ್ನಪ್ಪಿದ್ದು ನಮಗೆ ನ್ಯಾಯ ಕೊಡಿಸಿ ಎಂದು ಉನ್ನಾವೋ ಸಂತ್ರಸ್ತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅತ್ಯಚಾರಿಗಳನ್ನ ಗಲ್ಲಿಗೇರಿಸುವ ಮೂಲಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Key words: Unnavo –rape-case- families- demand- action –against- rapists.